ದೇಶ ವಿದೇಶ

ಅಕ್ಟೋಬರ್ 4-5ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ: ಪುಟಿನ್ – ಮೋದಿ ನಡುವೆ ಮಹತ್ವದ ಮಾತುಕತೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಅಕ್ಟೋಬರ್ 4-5 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ರಾಜಧಾನಿ ದೆಹಲಿಯಲ್ಲಿ ಪುಟಿನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ.
19ನೇ ಇಂಡೋ-ರಷ್ಯನ್ ಶೃಂಗಸಭೆ ಹಿನ್ನಲೆಯಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಕಳೆದ ಬಾರಿಯ ಶೃಂಗಸಭೆ 2017ರಲ್ಲಿ ಸೆಂಟ್ ಪೀಟರ್ ಬರ್ಗ್ ನಲ್ಲಿ ನಡೆದಿತ್ತು. ಕಳೆದ ಮೇ ತಿಂಗಳಿನಲ್ಲಿ ಮೋದಿ ಹಾಗೂ ಪುಟಿನ್ ಅವರು ಸೋಚಿಯಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು.

About the author

ಕನ್ನಡ ಟುಡೆ

Leave a Comment