ರಾಜ್ಯ ಸುದ್ದಿ

ಅಕ್ರಮ ಗಣಿಗಾರಿಕೆ ಕೇಸ್: ಸಿಬಿಐ, ಜನಾರ್ದನ ರೆಡ್ಡಿ ಪತ್ನಿಗೆ ಹೈಕೋರ್ಟ್ ನೊಟೀಸ್

ಬೆಂಗಳೂರು: ರಾಜ್ಯ ಹೈಕೋರ್ಟ್ ಸಿಬಿಐ ಮತ್ತು ಮಾಜಿ ಸಚಿವ ಗಣಿಧನಿ ಜಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿ ಅರುಣ ಅವರಿಗೆ ನೊಟೀಸ್ ಜಾರಿ ಮಾಡಿದೆ. ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಗಣಿಯನ್ನು ಅಕ್ರಮವಾಗಿ ರಫ್ತು ಮಾಡಿರುವ ಕೇಸಿಗೆ ಸಂಬಂಧಪಟ್ಟಂತೆ ಸಿಬಿಐ ವಿಶೇಷ ನ್ಯಾಯಾಲಯ ಲಕ್ಷ್ಮಿ ಅರುಣ ಅವರನ್ನು ಕೇಸಿನಿಂದ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಮಾಜ ಪರಿವರ್ತನ ಸಮುದಾಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ತಮ್ಮನ್ನು ಕೇಸಿನಿಂದ ಖುಲಾಸೆಗೊಳಿಸುವಂತೆ ಅರುಣ ಈ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ 2015ರ ಅಕ್ಟೋಬರ್ 8ರಂದು ಕ್ಲೀನ್ ಚಿಟ್ ನೀಡಿದ್ದರು. ಅದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

About the author

ಕನ್ನಡ ಟುಡೆ

Leave a Comment