ರಾಜಕೀಯ

ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬಳ್ಳಾರಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ  ತಮ್ಮ ವಿರುದ್ಧ ಸಂಚು ರೂಪಿಸಿ ಜೈಲಿಗೆ ಕಳುಹಿಸಿದ್ದರು ಎಂಬ ಮಾಜಿ ಸಚಿವ ಜನಾರ್ದನ ರೆಡ್ಡಿ  ಆರೋಪದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗೂಂಡುರಾವ್ , ಜನಾರ್ದನ ರೆಡ್ಡಿಗೆ  ಏನು ಮಾತನಾಡುತ್ತಿದ್ದೀನಿ ಎಂಬುದರ ಬಗ್ಗೆ ಅರಿವು ಇರಬೇಕು. ಸಿದ್ದರಾಮಯ್ಯ ಹೇಗೆ ಜೈಲಿಗೆ ಕಳುಹಿಸಲು ಸಾಧ್ಯ,  ಅವರೆನ್ನೂ ನ್ಯಾಯಾಧೀಶರೇ  ಎಂದು ಪ್ರಶ್ನಿಸಿದರು.ಜನಾರ್ದನ ರೆಡ್ಡಿ ಏನು ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಈಗ ದೊಡ್ಡದಾಗಿ ಮಾತನಾಡಿದ್ದರೆ ಏನೂ ಆಗಲ್ಲ, ಶ್ರೀರಾಮುಲು  ಹಾಗೂ ಸುರೇಶ್ ಬಾಬು ಅವರಿಗೆ ಏನು ಆಯಿತು ಎಲ್ಲವೂ ಜನರಿಗೆ ಗೊತ್ತಿದೆ ಎಂದು ಹೇಳಿದರು.ಕೆಲ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಜನಾರ್ದನ ರೆಡ್ಡಿ ಸುಳ್ಳು,  ಈ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವುದನ್ನು ಜನಾರ್ದನ ರೆಡ್ಡಿ ನಿಲ್ಲಿಸಬೇಕು, ಜನರು ಎಲ್ಲ ಕಾಲದಲ್ಲೂ ನಿಮ್ಮನ್ನು ನಂಬುವುದಿಲ್ಲ ಎಂದರುಇನ್ನೂ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ದಿನೇಶ್ ಗುಂಡೂರಾವ್,  ಈಶ್ವರಪ್ಪ ಅವರಿಗೆ ತಾನೂ ಏನು ಮಾತನಾಡುತ್ತೇನೆ ಎಂಬುದು ಅವರಿಗೆ ಗೊತ್ತಿರುವುದಿಲ್ಲ, ಯೋಚನೆ ಮಾಡಿ ಮಾತನಾಡಲಿ ಎಂದರು. ಉಪಚುನಾವಣೆ ಬಳಿಕ ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುವುದಾಗಿ ಹೇಳುತ್ತಿದೆ. ಜನತೆ ಉಗ್ರಪ್ಪ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು.

About the author

ಕನ್ನಡ ಟುಡೆ

Leave a Comment