ರಾಜ್ಯ ಸುದ್ದಿ

ಅಕ್ರಮ ಮರಳುಗಾರಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಲಾರಿ ಹರಿಸಿ ಕೊಲೆ

ರಾಯಚೂರು: ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿಯ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿರುವ  ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರಿನ ಮಾನ್ವಿ ತಾಲೂಕು ಚೀಕಲಪರ್ವಿ ಸಮೀಪ ಶನಿವಾರ ಸಂಭವಿಸಿದ ಘಟನೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ತಮ್ಮ ಪ್ರಾಣ  ಕಳೆದುಕೊಂಡಿದ್ದಾರೆ. ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಮಾಹಿತಿ ಪಡೆದಿದ್ದ ಸಾಹೇಬ್ ಪಟೇಲ್ ಮರಳು ಸಾಗಣೆ ಲಾರಿಯನ್ನು ತಡೆಯಲು ಮುಂದಾಗಿದ್ದಾರೆ.ಆಗ ಅಧಿಕಾರಿಯ ಮೇಲೆಯೇ ಲಾರಿ ಹತ್ತಿಸಿದ್ದ ದಂಧೆಕೋರರು ಅಧಿಕಾರಿಗೆ ಗಾಯವಾಗಿ ನೆಲಕ್ಕುರುಳುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಸಧ್ಯ ಮಾನ್ವಿ ಪೋಲೀಸರು ಸ್ಥಳಕ್ಕಾಗಮಿಸಿ ಘಟನೆಗೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದ  ಅಧಿಕಾರಿ ಸಾಹೇಬ್ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

About the author

ಕನ್ನಡ ಟುಡೆ

Leave a Comment