ರಾಷ್ಟ್ರ ಸುದ್ದಿ

ಅಜ್ಮೀರ್ ದರ್ಗಾಕ್ಕೆ ತೆರಳಿ ಚಾದರ್ ಸಮರ್ಪಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಅಜ್ಮೀರ್ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು 13 ನೇ ಶತಮಾನದ ಸೂಫಿ ಸಂತ ಖ್ವಾಜಾ ಮೊಹಿನ್ನುದ್ದಿನ್ ಚಿಷ್ಠಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾಜಸ್ತಾನ  ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ  ತೆರಳಿದ ರಾಹುಲ್ ಗಾಂಧಿ  ದರ್ಗಾಕ್ಕೆ ಚಾದರ್ ಸಮರ್ಪಿಸುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಂತರ ರಾಹುಲ್ ಗಾಂಧಿ ಪುಷ್ಕರ್ ಗೆ ತೆರಳಲಿದ್ದು, ಅಲ್ಲೂ ಕೂಡಾ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜೈಸ್ಮಲ್ಮಾರ್ ಜಿಲ್ಲೆಯ ಪೋಕ್ರಾನ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

About the author

ಕನ್ನಡ ಟುಡೆ

Leave a Comment