ರಾಜಕೀಯ

ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ: ಸಿದ್ದರಾಮಯ್ಯರದ್ದು ಹತಾಶ ಹೇಳಿಕೆ; ಯಡಿಯೂರಪ್ಪ

ಬೆಂಗಳೂರು: ಬಿಜೆಪಿಯ ಕುದುರೆ ವ್ಯಾಪಾರಕ್ಕೆ ನಿಂತಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ರಮೇಶ್ ಜಾರಕಿಹೊಳಿ ಸೇರಿ ಕಾಂಗ್ರೆಸ್ ಪಕ್ಷದ ಯಾವುದೇ ಅತೃಪ್ತರ ಶಾಸಕರ ಜೊತೆ ನಾವು ಸಂಪರ್ಕದಲ್ಲಿಲ್ಲ. ಸದ್ಯಕ್ಕೆ ಸರ್ಕಾರ ರಚನೆ ಅಸಾಧ್ಯದ ಮಾತು ಎಂದು ಹೇಳಿದ್ದಾರೆ.

ಜಾರಕಿಗೊಳಿ ಜೊತೆ ಚರ್ಚಿಸಲಾಗಿದೆ ಎಂಬುದೆಲ್ಲಾ ಬರೀ ಊಹಾಪೋಹವಷ್ಟೇ. ನಾವು ಕಾಂಗ್ರೆಸ್ ಅತೃಪ್ತ ಶಾಸಕರ ಜೊತೆಗೆ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನಾನು ಭೇಟಿಯಾಗಬೇಕಿತ್ತು. ಆದರೆ, ಅವರು ಗುಜರಾತ್’ನಿಂದ ಹಿಂತಿರುಗಿಲ್ಲ. ಈ ಹಿನ್ನಲೆಯಲ್ಲಿ ಪಕ್ಷದ ಅನ್ಯ ಕೆಲ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಈ ಮಾತುಕತೆ ಪಕ್ಷ ಸಂಘಟನೆ, ಲೋಕಸಭಾ ಚುನಾವಣಾ ತಯಾರಿ ಹಾಗೂ ರೈತ ಸಮಾವೇಶಕ್ಕಷ್ಟೇ ಸೀಮಿತವಾಗಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

About the author

ಕನ್ನಡ ಟುಡೆ

Leave a Comment