ರಾಜ್ಯ ಸುದ್ದಿ

ಅದಿರು ನಾಪತ್ತೆ ಪ್ರಕರಣ: ಶಾಸಕ ಸಿಂಗ್, ನಾಗೇಂದ್ರಗೆ ಬಂಧನ ಭೀತಿ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾಗಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಹಾಗೂ ವಿಜಯನಗರ ಶಾಸಕ ಆನಂದ್ ಸಿಂಗ್ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಅದಿರು ನಾಪತ್ತೆ ಪ್ರಕರಣದ ವಿಚಾರಣೆಗೆ ಸತತ ಗೈರಾಗಿದ್ದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಕೋರ್ಟ್ ಆದೇಶದಿಂದಾಗಿ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ನಾಗೇಂದ್ರ ಬಂಧನದ ಭೀತಿಯಲ್ಲಿದ್ದಾರೆ. ಏತನ್ಮಧ್ಯೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ನಾಗೇಂದ್ರ,ಕೋರ್ಟ್ ವಾರಂಟ್ ಬಗ್ಗೆ ಗೊತ್ತಾಗಿದೆ.ವಾರಂಟ್ ಹಿಂಪಡೆಯುವಂತೆ ಕೋರಿ ನಾಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

 

About the author

ಕನ್ನಡ ಟುಡೆ

Leave a Comment