ರಾಜಕೀಯ

ಅಧಿಕೃತ ಪ್ರಕಟಣೆಗೂ ಮುನ್ನವೇ ದಿನಾಂಕ ಸೋರಿಕೆ: ತನಿಖೆಗಾಗಿ ಆಯೋಗದಿಂದ ಸಮಿತಿ ರಚನೆ

 ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಅಧಿಕೃತವಾಗಿ ಪ್ರಕಟವಾಗುವುದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗ ಸಮಿತಿ ರಚನೆ ಮಾಡಿದೆ.
ಅಧಿಕೃತ ಪ್ರಕಟಣೆಗೂ ಮುನ್ನವೇ ದಿನಾಂಕ ಸೋರಿಕೆಯಾಗಿರುವುದರ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಕ್ಕೂ ಸಲಹೆ ನೀಡುವಂತೆ ಸೂಚನೆ ನೀಡಲಾಗಿದೆ.
 ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ನ ಮುಖ್ಯಸ್ಥ ಹಾಗೂ ರಾಜ್ಯ ಕಾಂಗ್ರೆಸ್ ಐಟಿ ಸೆಲ್ ಉಸ್ತುವಾರಿ ಚುನಾವಣಾ ದಿನಾಂಕವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

About the author

ಕನ್ನಡ ಟುಡೆ

Leave a Comment