ರಾಜಕೀಯ

ಅನಿತಾ ಪರ ಪ್ರಚಾರಕ್ಕೆ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ರೆಡಿ

ರಾಮನಗರ: ಜೆಡಿಎಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಕರೆದರೆ ಮಾತ್ರ ಹೋಗುವೆ ಎಂದು ಮಾಜಿ ಶಾಸಕ ಹಾಗೂ ಈ ಹಿಂದೆ ಜೆಡಿಎಸ್‌ನಲ್ಲಿದ್ದ ಎಚ್‌.ಸಿ.ಬಾಲಕೃಷ್ಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ದೇವೇಗೌಡರು ಮತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಇಲ್ಲಿಯ ಮತದಾರರ ಒಲವಿದ್ದು, ಯಾರು ಪ್ರಚಾರಕ್ಕೆ ಬರದಿದ್ದರೂ ಅವರ ಪಕ್ಷ ದ ಅಭ್ಯರ್ಥಿ ಗೆಲ್ಲುತ್ತಾರೆ,”ಎಂದು ಮಾರ್ಮಿಕವಾಗಿ ನುಡಿದರು. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ವೈಯಕ್ತಿಕ ಅಭಿಪ್ರಾಯ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಪಕ್ಷ ದ ನಾಯಕರ ಬಳಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು.

About the author

ಕನ್ನಡ ಟುಡೆ

Leave a Comment