ರಾಜಕೀಯ

ಅಭಿವೃದ್ಧಿ ಮುಕ್ತ ಭ್ರಷ್ಟಾಚಾರದಲ್ಲಿ ಮಾತ್ರ ಕರ್ನಾಟಕ ಸರ್ಕಾರಕ್ಕೆ ಆಸಕ್ತಿ: ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಭಿವೃದ್ಧಿ ಮುಕ್ತ ಭ್ರಷ್ಟಾಚಾರದಲ್ಲಿ ಮಾತ್ರ ಕರ್ನಾಟಕ ಸರ್ಕಾರಕ್ಕೆ ಆಸಕ್ತಿ ಇದೆ ಎಂದು ಆರೋಪಿಸಿದ್ದಾರೆ.
ಇಂದು ದೆಹಲಿಯಿಂದ ಕರ್ನಾಟಕದ ಹಲವು ಜಿಲ್ಲೆಗಳ ಬೂತ್‌ ಮಟ್ಟದ ಬಿಜೆಪಿ  ಕಾರ್ಯಕರ್ತರ ಜತೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಪ್ರಧಾನಿ, ಎಚ್ ಡಿ ಕುಮಾರಸ್ವಾಮಿ ಸರ್ಕಾರ ರೈತರ ಸಾಲ ಮನ್ನಾ ಘೋಷಣೆ ರೈತರ ಬಗ್ಗೆ ಮಾಡಿದ ಅತ್ಯಂತ ಕ್ರೂರ ಜೋಕ್ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರ ಮುಕ್ತ ಸರ್ಕಾರ ಬಯಸುತ್ತಿದ್ದಾರೆ. ಆದರೆ ಕರ್ನಾಟಕ ಸರ್ಕಾರ ಅಭಿವೃದ್ಧಿ ಮುಕ್ತ ಭ್ರಷ್ಟಾಚಾರ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
‘ಕರ್ನಾಟಕದಲ್ಲಿ ಸರ್ಕಾರ ರಚಿಸಿದವರು, ಹೇಗಾದರೂ ಮಾಡಿ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅಲ್ಲದೆ ಅಧಿಕಾರದಲ್ಲಿ ಹೇಗಾದರೂ ಇರಬಹುದು ಎಂದು ಅವರು ಅಂದುಕೊಳ್ಳಬಹುದು. ಆದರೆ, ಕರ್ನಾಟಕ ಹಾಗೂ ದೇಶದ ಜನತೆ ಅವರನ್ನು ವೀಕ್ಷಿಸುತ್ತಿದ್ದಾರೆ. ಅವರ ದುರಾಡಳಿತಕ್ಕೆ ಜನತೆಯೇ ಶೀಘ್ರದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಬೆಳಗಾವಿ, ಬೀದರ್‌, ದಾವಣಗೆರೆ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಬಿಜೆಪಿಯ ಬೂತ್‌ ಮಟ್ಟದ ಕಾರ್ಯಕರ್ತರ ಜತೆ ಮೋದಿ ವೀಡಿಯೋ ಕಾನ್ಫರೆನ್ಸ್‌ ಜತೆಯಲ್ಲಿ ಸಂವಹನ ನಡೆಸಿದ್ದಾರೆ. ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ, ರಾಜ್ಯವನ್ನು ಸಹ ಕೇಂದ್ರೀಕರಿಸಿದೆ.

About the author

ಕನ್ನಡ ಟುಡೆ

Leave a Comment