ರಾಷ್ಟ್ರ

ಅಮೃತಸರ ದುರಂತ : ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶ

ಅಮೃತಸರ : ರೈಲು ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್  ಆದೇಶಿಸಿದ್ದಾರೆ.ಮೃತ ಕುಟುಂಬಗಳ ಸದಸ್ಯರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ಕೂಡಲೇ 3 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಅವರು ಆದೇಶಿಸಿದ್ದಾರೆ. ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್ ದುರಂತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ನಾಲ್ಕು ವಾರಗಳೊಳಗೆ ವರದಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ದುರಂತದಲ್ಲಿ 59 ಜನರು ಮೃತಪಟ್ಟಿದ್ದು, 57 ಜನರು ಗಾಯಗೊಂಡಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು, 9 ಜನರನ್ನು ಹೊರತುಪಡಿಸಿದಂತೆ ಉಳಿದೆಲ್ಲಾ  ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ತಿಳಿಸಿದರು. ರೈಲು ದುರಂತ ಸಂಭವಿಸುತ್ತಿದ್ದಂತೆ ಇಡೀ ಆಡಳಿತವೇ  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಪಂಜಾಬಿನ ಇಡೀ ಸಂಪುಟವೇ ಇಲ್ಲಿರುವುದಾಗಿ  ಅಮರಿಂದರ್ ಸಿಂಗ್ ಹೇಳಿದರು.ಈ ಮಧ್ಯೆ ರೈಲು ದುರಂತ ಸಂಭವಿಸಿದ ಪ್ರದೇಶದಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿದ್ದ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದರು. ರೈಲಿನ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಹೆಚ್ಟಿನ ಸಂಖ್ಯೆಯಲ್ಲಿ ಜನರಿದ್ದರೂ ಅತಿ ವೇಗದಲ್ಲಿ ರೈಲು ನಿರ್ಗಮಿಸಿತು. ಚಾಲಕ ರೈಲಿನ ವೇಗವನ್ನು ಕಡಿಮೆ ಗೊಳಿಸಲೇ ಇಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

About the author

ಕನ್ನಡ ಟುಡೆ

Leave a Comment