ರಾಜ್ಯ ಸುದ್ದಿ

ಅವರಪ್ಪನ ಆಣೆ ಮೋದಿ ಮತ್ತೆ ಪ್ರಧಾನಿ ಆಗಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಏನೇ ತಿಪ್ಪರಲಾಗ ಹಾಕಿದರೂ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರೋದಿಲ್ಲ. ಪ್ರಧಾನಿ  ಮೋದಿ ಅವರಪ್ಪನ ಆಣೆಗೂ ಮತ್ತೆ ಪ್ರಧಾನಿಯಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ರಾಜ್ಯ ಯುವ ಕಾಂಗ್ರೆಸ್‌ ಸರ್ವ ಸದಸ್ಯರ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದರು. ಪ್ರಜಾಪ್ರಭುತ್ವವನ್ನೇ ನಾಶ ಮಾಡಲು ಬಿಜೆಪಿ ಹೊರಟಿದೆ. ಬಿಜೆಪಿಯ ಕೆಲವು ನಾಯಕರು ಸಂವಿಧಾನವನ್ನೇ ಬದಲಾಯಿಸಲು ರೆಡಿಯಾಗಿದ್ದರು.

ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರು ಸಂವಿಧಾನ ಬದಲಾಯಿಸುವ ಮಾತನಾಡುತ್ತಾರೆ. ನಾನೇನಾದರೂ ಪ್ರಧಾನಿಯಾಗಿದ್ದರೆ, ಇಂಥವರನ್ನು ಜೈಲಿಗೆ ಹಾಕುತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಷಯವಾಗಿ ನಾವೇನೂ ಬೆಗ್ಗರ್ಸ್‌ ಅಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ನಾವು ಕೂಡ ಬೆಗ್ಗರ್ಸ್‌ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ರಾಜ್ಯದಲ್ಲಿ ಈಗ ಸಮ್ಮಿಶ್ರ ಸರಕಾರ. ಅದು ಐದು ವರ್ಷ ಪೂರ್ಣಗೊಳ್ಳುತ್ತದೆ. ರಾಜ್ಯದಲ್ಲಿರುವ ಸ್ಥಾನಗಳ ಪೈಕಿ ನಾವು ರಾಜೀ ಮಾಡಿಕೊಳ್ಳುವುದಿಲ್ಲ. ಉಳಿದ ಸ್ಥಾನಗಳ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು. ಹಾಲಿ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡಲು ಸಾಧ್ಯವೇ ಇಲ್ಲ. ಉಳಿದ ಕ್ಷೇತ್ರಗಳ ಬಗ್ಗೆ ಚರ್ಚಿಸಿ ಮುಂದಿನ ನಡೆ ಎಂದು ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ತಿಳಿಸಿದರು.

 

About the author

ಕನ್ನಡ ಟುಡೆ

Leave a Comment