ರಾಷ್ಟ್ರ ಸುದ್ದಿ

ಅಸ್ಸಾಂ: ವಿಷಕಾರಿ ಮದ್ಯ ಸೇವಿಸಿ 32 ಕಾರ್ಮಿಕರು ಸಾವು, ಹಲವರು ಅಸ್ವಸ್ಥ

ಗುವಾಹಟಿ: ಅಸ್ಸಾಂನ ಗೋಲಾಘಾಟ್ ನಲ್ಲಿ ವಿಷಕಾರಿ ಮದ್ಯ ಸೇವಿಸಿ ಒಂಬತ್ತು ಮಹಿಳೆಯರು ಸೇರಿದಂತೆ ಟೀ ತೋಟದ 32 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ವಿಷಕಾರಿ ಮದ್ಯ ಸೇವಿಸಿದ ಹಲವು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ. ಮೃತರಲ್ಲಿ ಹೆಚ್ಚಿನವರು ಗೋಲಾಘಾಟ್‌ನ ಶಾಲಮಾರ ಪ್ರಾಂತ್ಯದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.
ಸುಮಾರು 100 ಜನರು ಈ ವಿಷಕಾರಿ ಮದ್ಯವನ್ನು ಸೇವಿಸಿದ್ದು, ಅಸ್ವಸ್ಥರಾದ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ಮೃತರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ನೆರವು ಒದಗಿಸಲು ಸರ್ಕಾರಕ್ಕೆ  ಮನವಿ ಮಾಡಿದ್ದಾರೆ.

About the author

ಕನ್ನಡ ಟುಡೆ

Leave a Comment