ರಾಜ್ಯ ಸುದ್ದಿ

ಆನಂದ್ ಸಿಂಗ್ ಹಲ್ಲೆ ಪ್ರಕರಣ: ಗಣೇಶ್​ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ  ಪ್ರಕರಣಕ್ಕೆ ಸಂಬಂಧಿಸಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಜಾಮೀನು ಅರ್ಜಿ ವಜಾಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಗಣೇಶ್ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದು ಗಣೇಶ್ ಅವರಿಗೆ ಜೈಲುವಾಸ ಖಾಯಂ ಆಗಿದೆ. ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ  ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ. ರಾಮಚಂದ್ರ ಉದಾರ್ ಜಾಮೀನು ಅರ್ಜಿ ವಜಾ ಮಾಡಿ ಆದೇಶಿಸಿದ್ದಾರೆ. ಗಣೇಶ್ ಪರ ವಕೀಲ ಸಿ.ಎಚ್​.  ಹನುಮಂತರಾಯಪ್ಪ ವಾದ  ಮಂಡಿಸಿದ್ದರೆ ಬಿಡದಿ ಪೊಲೀಸರ ಪರ ಸರ್ಕಾರಿ ಅಭಿಯೋಜಕಿ ರಾಜೇಶ್ವರಿ ಪ್ರತಿವಾದ ಮಂಡಿಸಿದ್ದಾರೆ. ಗಣೇಶ್ ನಡೆಸಿದ್ದ ಹಲ್ಲೆಯಿಂದಾಗಿ ಆನಂದ್ ಸಿಂಗ್ ಅವರ ಕಣ್ಣು, ತಲೆಗೆ ಗಂಭೀರ ಗಾಯವಾಗಿತ್ತು.ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಿಡದಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಶಾಸಕ ಗಣೇಶ್ ನಾಪತ್ತೆಯಾಗಿದ್ದರು. ಸರಿಯಾಗಿ ಒಂದು ತಿಂಗಳ ನಂತರ ಗುಜರಾತಿನಲ್ಲಿ ಶಾಸಕರ ಬಂಧನವಾಗಿತ್ತು.

About the author

ಕನ್ನಡ ಟುಡೆ

Leave a Comment