ರಾಜಕೀಯ

ಆಪರೇಷನ್ ಕಮಲ: ವಕೀಲರಿಂದ ಯಡಿಯೂರಪ್ಪ ವಿರುದ್ಧ ದೂರು

ಬೆಂಗಳೂರು: ಸಮ್ಮಿಶ್ರ ಪತನಗೊಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮಲ್ಲೇಶ್ವರಂ ಶಾಸಕ ಸಿ.ಎನ್.ಅಶ್ವತನಾರಾಯಣ ಅವರು ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷದ ಅತೃಪ್ತ ಶಾಸಕರನ್ನು ಗೌಪ್ಯವಾಗಿ ಭೇಟಿಯಾಗುವ ಮೂಲಕ ಆಪರೇಷನ್ ಕಮಲದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ನಗರದ ವಕೀಲ ಎಸ್‌.ಎಲ್‌ಎನ್.ಮೂರ್ತಿ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಿಎಸ್‌ವೈ ಹಾಗೂ ಅವರ ಪಕ್ಷದ ನಾಯಕರು ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಕೆಲ ಶಾಸಕರನ್ನು ಸದನದಲ್ಲಿ ಭಾಗಿಯಾಗದಂತೆ ಒತ್ತಡ ಹೇರುತ್ತಿದ್ದಾರೆಂದು ವಕೀಲರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಅಪೂರ್ಣವಾಗಿವೆ ಎಂದು ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದಾರೆ. ರಾಜ್ಯ ಬಜೆಟ್‌ 2019ರ ಮಂಡನೆಗೂ ಮೊದಲು ಸಿಎಂ ಕುಮಾರಸ್ವಾಮಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಪರೇಷನ್‌ ಕಮಲದ ಆಡಿಯೋ ಬಿಡುಗಡೆ ಮಾಡುವ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದರು.

ಗುರುಮಠಕಲ್‌ ಕ್ಷೇತ್ರದ ಜೆಡಿಎಸ್‌ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರಿಗೆ ಬಿಎಸ್‌ ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎನ್ನಲಾದ ಆಡಿಯೋವನ್ನು ಬಿಡುಗಡೆ ಮಾಡಿ, ಈ ಆಡಿಯೋ ರೆಕಾರ್ಡ್‌ ಮಾಡಿಸಿದ್ದು ನಾನೇ ಎಂಬುದಾಗಿ ಸಿಎಂ ಹೇಳಿದ್ದರು.

About the author

ಕನ್ನಡ ಟುಡೆ

Leave a Comment