ಕ್ರೀಡೆ

ಆಸಿಸ್ ವಿರುದ್ಧದ 2ನೇ ಟೆಸ್ಟ್ ಗೂ ಮುನ್ನವೇ ಟೀಂ ಇಂಡಿಯಾಗೆ ಶಾಕ್

ಪರ್ತ್: ಆಸಿಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟವಾಗಿದ್ದು, ಗಾಯಾಳು ಆಟಗಾರರಾದ ಪೃಥ್ವಿ ಶಾ, ಅಶ್ವಿನ್, ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಪ್ರಬಲ ಕಾಂಗರೂಗಳ ವಿರುದ್ಧ ಪರ್ತ್ ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮತ್ತೆ ಭಾರತ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ಸರಣಿ ಆರಂಭಕ್ಕೂ ಮುನ್ನವೇ ತಂಡದ ಪ್ರಮುಖ ಆಟಗಾರ ಪೃಥ್ವಿಶಾ ಗಾಯಗೊಂಡು ಹೊರಗುಳಿದರೆ, ಮೊದಲೆ ಟೆಸ್ಟ್ ಪಂದ್ಯದಲ್ಲಿ ಪ್ರಬಲ ಬೌಲಿಂಗ್ ಮಾಡಿ ಆಸಿಸ್ ಸೋಲಿಗೆ ಕಾರಣರಾಗಿದ್ದ ಆರ್ ಅಶ್ವಿನ್ ಕೂಡ ಗಾಯದ ಸಮಸ್ಯೆಯಿಂದಾಗಿ 2ನೇ ಟೆಸ್ಟ್ ನಿಂದ ಹೊರಗುಳಿದಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಹಿಮ್ಮಡಿ ಗಾಯಕ್ಕೆ ತುತ್ತಾಗಿದ್ದ ಪೃಥ್ವಿ ಶಾ ಎರಡನೇ ಪಂದ್ಯಕ್ಕೂ ಅಲಭ್ಯರಾಗಿದ್ದು, ಮೊದಲ ಟೆಸ್ಟ್ ಪಂದ್ಯದ ವೇಳೆ ಕಿಬ್ಬೊಟ್ಟೆ ನೋವಿನಿಂದ ಬಳಲಿದ ಅಶ್ವಿನ್ 2ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅಂತೆಯೇ ಬೆನ್ನು ನೋವಿನಿಂದ ಬಳಲುತ್ತಿರುವ ರೋಹಿತ್ ಶರ್ಮಾ ಕೂಡ ತಂಡದಿಂದ ಹೊರಗುಳಿದಿರುವುದು ತಂಡದ ನಾಯಕ ವಿರಾಟ್ ಕೊಹ್ಲಿ ದೊಡ್ಡ ತಲೆನೋವು ತಂದಿದೆ.
ಮೊದಲ ಪಂದ್ಯದ ಗೆಲುವಿನಿಂದ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿರುವ ಟೀಂ ಇಂಡಿಯಾಗೆ ಆಟಗಾರರ ಗಾಯದ ಸಮಸ್ಯೆ ಇದೀಗ ದೊಡ್ಡ ಸಮಸ್ಯೆಯಾಗಿದೆ.
2ನೇ ಟೆಸ್ಟ್ ಗಾಗಿ ಪ್ರಕಟವಾದ 13 ಜನರ ಟೀಂ ಇಂಡಿಯಾ ತಂಡ ಇಂತಿದೆ.
ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಭುವನೇಶ್ವರ ಕುಮಾರ್, ಉಮೇಶ್ ಯಾದವ್

About the author

ಕನ್ನಡ ಟುಡೆ

Leave a Comment