ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಗೆ ಭಾರತ ತಂಡ ಪ್ರಕಟ

ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ 6 ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಆಲ್ ರೌಂಡರ್ ಹನುಮ ವಿಹಾರಿ ಹಾಗೂ ರೋಹಿತ್ ಶರ್ಮಾಗೆ ಸ್ಥಾನ ನೀಡಲಾಗಿದೆ.
ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವ ಹಿನ್ನೆಲೆಯಲ್ಲಿ 6 ನೇ ಕ್ರಮಾಂಕದಲ್ಲಿ ಆಡುವ ಆಟಗಾರರನ್ನು ಆಯ್ಕೆ ಮಾಡಬೇಕಿತ್ತು. ಈ ಹಿನ್ನೆಲೆಯಲ್ಲಿ ಆಲ್ ರೌಂಡಾರ್ ಹನುಮ ವಿಹಾರಿ ಹಾಗೂ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇಬ್ಬರ ನಡುವೆ 6 ನೇ ಕ್ರಮಾಂಕದಲ್ಲಿ ಆಡಲು ಪೈಪೋಟಿ ಇದೆ. ದಕ್ಷಿಣ ಆಫ್ರಿಕಾದ ವಿರುದ್ಧ ಜನವರಿ ತಿಂಗಳಲ್ಲಿ ರೋಹಿತ್ ಶರ್ಮಾ ಟೆಸ್ಟ್ ಪಂದ್ಯವನ್ನಾಡಿದ್ದರು. 2014-15 ರಲ್ಲಿ ಆಸ್ಟ್ರೇಲಿಯಾ ಪರಿಸ್ಥಿತಿಗಳಲ್ಲಿ ಆಡಿರುವ ಅನುಭವಿ ಆಟಗಾರರಾಗಿದ್ದಾರೆ. ಆಲ್ ರೌಂಡರ್ ಹನುಮ ವಿಹಾರಿ ಸೆಪ್ಟೆಂಬರ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್  ಪಂದ್ಯದಲ್ಲಿ ಆಡಿ 56 ರನ್ ಗಳಿಸಿದ್ದರೆ, ಬೌಲಿಂಗ್ ವಿಭಾಗದಲ್ಲಿ 37 ರನ್ ನೀಡಿ 3 ವಿಕೆಟ್ ಗಳಿಸಿದ್ದರು.
ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವುದು ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದು, ಬೌಲಿಂಗ್ ವಿಭಾಗದಲ್ಲಿ ಇಶಾಂತ್ ಶರ್ಮ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಇಂಗ್ಲೆಂಡ್ ಸರಣಿಯ 2 ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಮುರಳಿ ವಿಜಯ್ ತಂಡಕ್ಕೆ ಮರಳಿದ್ದು, ಟಾಪ್ ಆರ್ಡರ್ ನಲ್ಲಿ ಲೋಕೇಶ್ ರಾಹುಲ್ ಗೆ ಸಾಥ್ ನೀಡಲಿದ್ದಾರೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಲೋಕೇಶ್ ರಾಹುಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರೆಹಾನೆ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಭ್ ಪಂತ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ.

About the author

ಕನ್ನಡ ಟುಡೆ

Leave a Comment