ರಾಜ್ಯ ಸುದ್ದಿ

ಇಂದು ಆಯುಧ ಪೂಜೆ ಸಂಭ್ರಮ, ನಾಳೆ ವಿಜಯದಶಮಿ, ಮೈಸೂರಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ

ಬೆಂಗಳೂರು: ಶರನ್ನವರಾತ್ರಿಯ 9ನೇ ದಿನವಾದ ಗುರುವಾರ ನಾಡಿನೆಲ್ಲೆಡೆ ಆಯುಧ ಪೂಜೆ ನೆರವೇರಿಸಲಾಗುವುದು. ಮೈಸೂರಲ್ಲಿ ಅಂಬಾವಿಲಾಸ ಅರಮನೆಯ ಕಲ್ಯಾಣಮಂಟಪದ ಆವರಣದಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ. ಅರಸರ ಕಾಲದ ಖಾಸಾ ಆಯುಧಗಳು, ವಾಹನಗಳು ಸೇರಿದಂತೆ ಇನ್ನಿತರ ವಸ್ತುಗಳಿಗೆ ಯದುವೀರ್‌ ಅವರು ಪೂಜೆ ಸಲ್ಲಿಸಲಿದ್ದಾರೆ.

ಮೈಸೂರಲ್ಲಿ ಜಂಬೂಸವಾರಿ: ಶುಕ್ರವಾರ ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದೀಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತಿಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಬಳಿಕ, ಮಧ್ಯಾಹ್ನ 3.40ರಿಂದ 4.10ರವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮಒಳಾವರಣದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ, 750 ಕೆ.ಜಿ.ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ರಾಜ ವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಇತರರು ಹಾಜರಿರುತ್ತಾರೆ. ರಾತ್ರಿ 7 ಗಂಟೆಗೆ ಬನ್ನಿಮಂಪಟದಲ್ಲಿ ಪಂಜಿನ ಕವಾಯತು ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಬಳಿಕ, ಸುಮಾರು 2 ಗಂಟೆಗಳ ಕಾಲ ಸಾಹಸಮಯ, ರೋಮಾಂಚಕಾರಿ ಸಾಹಸ ಪ್ರದರ್ಶನ ನಡೆಯಲಿದ್ದು, ಇದರೊಂದಿಗೆ ಹತ್ತು ದಿನಗಳ ಮೈಸೂರು ದಸರೆಗೆ ತೆರೆ ಬೀಳಲಿದೆ.

 

About the author

ಕನ್ನಡ ಟುಡೆ

Leave a Comment