ಸಿನಿ ಸಮಾಚಾರ

ಇಂದು ಬೆಂಗಳೂರು ಸೆಂಟ್ರಲ್ ನಲ್ಲಿ ಮೋಹನ್ ಪರ ನಟ ದರ್ಶನ್ ಪ್ರಚಾರ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ನಡೆಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಮವಾರ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ. ಇಂದು ಬೆಳಗ್ಗೆಯಿಂದ ಅವರು ಬೆಂಗಳೂರು ಸೆಂಟ್ರಲ್​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್​ ಪರ ಮತಯಾಚನೆ ಮಾಡಲಿದ್ದಾರೆ. ಇಂದು ಬೆಳಗ್ಗೆ ಹೊಸ ತಿಪ್ಪಸಂದ್ರದ ಆಂಜನೇಯ ದೇಗುಲದಿಂದ ರೋಡ್ ಶೋ ಆರಂಭಿಸಿ ಮತದಾರರಲ್ಲಿ ಪಿ.ಸಿ.ಮೋಹನ್ ಪರ ಮತಯಾಚನೆ ಮಾಡಲಿದ್ದಾರೆ. ಇದಾದ ಬಳಿಕ ದರ್ಶನ್ ವಾಪಸ್ ಮಂಡ್ಯಕ್ಕೆ ತೆರಳಿ ಸುಮಲತಾ ಅಂಬರೀಶ್ ಪರ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಕಳೆದ ಒಂದು ವಾರ ಸುಮಲತಾ ಪರ ಮಂಡ್ಯದಲ್ಲಿ ನಟರಾದ ದರ್ಶನ್ ಹಾಗೂ ಯಶ್ ಅಬ್ಬರದ ಪ್ರಚಾರ ನಡೆಸಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು.

About the author

ಕನ್ನಡ ಟುಡೆ

Leave a Comment