ರಾಷ್ಟ್ರ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಇಂದು ತಿಳಿದುಬಂದಿದೆ. ಬಿಜೆಪಿ ನಾಯಕನ ಹತ್ಯೆಗೆ ಯತ್ನ ದಾಳಿಗೆ ಸೇನೆ ದಿಟ್ಟ ಉತ್ತರ ಇಬ್ಬರು ಉಗ್ರರರನ್ನು ಹತ್ಯೆ  ಮಾಡಲಾಗಿದೆ.ಹಾಗೂ ಓರ್ವ ಭದ್ರತಾ ಸಿಬ್ಬಂದಿಗೆ ಗಾಯವಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಬಲ್ಹಮದ ಬಿಜೆಪಿ ನಾಯಕ ಅನ್ವರ್ ಖಾನ್ ಅವರನ್ನು ಹತ್ಯೆ ಮಾಡಲು ಉಗ್ರರು ಯತ್ನ ನಡೆಸಿದ್ದರು. ಈ ವೇಳೆ ಅನ್ವರ್ ಖಾನ್ ಅವರ ಭದ್ರತಾ ಸಿಬ್ಬಂದಿ ಬಿಲಾಲ್ ಅಹ್ಮದ್ ಎಂಬುವವರು ಗಾಯಗೊಂಡಿದ್ದಾರೆ. ಉಗ್ರರು ದಾಳಿ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಸೇನೆಯು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ದಾಳಿಯಲ್ಲಿ ಬಿಜೆಪಿ ನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಅನ್ವರ್ ಖಾನ್ ಅವರ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪೊಲೀಸರು ಉಗ್ರರ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅಹಮದ್ ಅವರು ಗಾಯಗೊಂಡಿದ್ದಾರೆ. ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು ಉಗ್ರರ ಕುರಿತ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ರು ಮಾಹಿತಿ ನೀಡಿದ್ದಾರೆ. ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

 

About the author

ಕನ್ನಡ ಟುಡೆ

Leave a Comment