ರಾಜಕೀಯ

ಈಡೇರದ ರಾಜ್ಯ ಕಾಂಗ್ರೆಸ್ ನಾಯಕರ ಭರವಸೆ: ಸಚಿವಾಕಾಂಕ್ಷಿಗಳಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ನಿರ್ಧಾರ

ಬೆಂಗಳೂರು/ಹುಬ್ಬಳ್ಳಿ: ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವುದಾಗಿ ರಾಜ್ಯ ಕಾಂಗ್ರೆಸ್ ನಾಯಕರು ನೀಡಿರುವ ಆಶ್ವಾಸನೆಯನ್ನು ನಂಬದ ಸಚಿವಾಕಾಂಕ್ಷಿಗಳು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಸಚಿವಕಾಂಕ್ಷಿಗಳು ಡಿಸೆಂಬರ್ 10ರೊಳಗೆ ಸಂಪುಟ ವಿಸ್ತರಣೆ ಮಾಡುವಂತೆ ಹೈ ಕಮಾಂಡ್ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರ ಮಾತಿನ ಮೇಲೆ ವಿಶ್ವಾಸ ಕಳೆದುಕೊಂಡಿರುವ ಸಚಿವಾಕಾಂಕ್ಷಿಗಳು, ಡಿಸೆಂಬರ್ 5 ರಂದು ಖರ್ಗೆ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಸಂಪುಟ ವಿಸ್ತರಣೆ ಮಾಡುವುದಾಗಿ ರಾಜ್ಯ ನಾಯಕರು ಇದುವರೆಗೂ ನೀಡಿರುವ ಆಶ್ವಾಸನೆ ಇದುವರೆಗೂ ಈಡೇರಿಲ್ಲ,ಕಳೆದ ಆರು ತಿಂಗಳಿಂದ ಇದೇ ರೀತಿಯ ಭರವಸೆ ನೀಡುತ್ತಿದ್ದಾರೆ. ರಾಹುಲ್ ಗಾಂಧಿ,.ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ, ಹೀಗಾಗಿ  ಡಿಸೆಂಬರ್ 7 ರ ನಂತರ ರಾಹುಲ್ ಗಾಂಧಿ ಫ್ರೀ ಆಗಲಿದ್ದಾರೆ, ಹೀಗಾಗಿ ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆ ಆಗುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment