ರಾಷ್ಟ್ರ ಸುದ್ದಿ

ಈ ಬಾರಿ ನರೇಂದ್ರ ಮೋದಿಯನ್ನು ಸೋಲಿಸಿ, ಇಲ್ಲದಿದ್ದರೆ ಶಾಶ್ವತವಾಗಿ ಅವರೇ ಪ್ರಧಾನಿ: ಕೇಜ್ರಿವಾಲ್ ಕಳವಳ

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಿ, ಇಲ್ಲದಿದ್ದರೆ ಶಾಶ್ವತವಾಗಿ ದೇಶಕ್ಕೆ ನರೇಂದ್ರ ಮೋದಿಯವರೇ ಪ್ರಧಾನಿಯಾಗೊತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಮತ್ತೆ ಪ್ರಧಾನಿ ಗದ್ದುಗೆ ಏರಿದರೆ 2019ರ ನಂತರ ಯಾವುದೇ ಚುನಾವಣೆ ಇರೋದಿಲ್ಲ ಅಂತ ಅರವಿಂದ್ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಅಳಿವಿನಂಚಿಗೆ ತಲುಪುತ್ತಿದೆ. ಮೋದಿ ಸರ್ಕಾರ ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ನ ಆಡಳಿತದ ಮಾದರಿಯನ್ನು ಅನುಸರಿಸುತ್ತಿದೆ ಅಂತಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಇನ್ನು ಮುಂದೆ ಚುನಾವಣೆಗಳೇ ಇರುವುದಿಲ್ಲ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರಿ ಸರ್ಕಾರ ನೆಲೆಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಮೋದಿ ಸರ್ಕಾರದ ವಿರುದ್ಧ ಮಾತನಾಡುವವರಿಗೆ ದೇಶದ್ರೋಹಿ ಪಟ್ಟ ಕಟ್ಟುತ್ತಾರೆ ಎಂದು ಕೇಜ್ರಿವಾಲ್ ದೂರಿದ್ದಾರೆ.

About the author

ಕನ್ನಡ ಟುಡೆ

Leave a Comment