ರಾಜಕೀಯ

ಈ ಬಾರಿ ಲೋಕಸಭೆಗೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ

ಹಾಸನ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದೆ ನಿರಾಶರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್​ ರೇವಣ್ಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಜ್ವಲ್​ ರೇವಣ್ಣ ಜಿಲ್ಲೆಯಲ್ಲಿ ಗೌಪ್ಯವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಜೆಡಿಎಸ್​ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಪ್ರಜ್ವಲ್​ ನಾಯಕರ ವಿಶ್ವಾಸ ಗಳಿಸಲು ಪ್ರಯತ್ನಿಸುತ್ತಿದ್ದಾರೆ.

ಪ್ರಜ್ವಲ್​ ರೇವಣ್ಣ ಈ ಹಿಂದೆ ಹಾಸನದ ಬೇಲೂರಿನಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ, ಟಿಕೆಟ್​ ಸಿಕ್ಕಿರಲಿಲ್ಲ. ನಂತರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ, ವರಿಷ್ಠರಾದ ದೇವೇಗೌಡರು ಸಮ್ಮತಿಸದಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಈ ಬಾರಿ ಹಾಸನದಿಂದ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ.

About the author

ಕನ್ನಡ ಟುಡೆ

Leave a Comment