ರಾಜ್ಯ ಸುದ್ದಿ

ಈ ವರ್ಷ ಸರಳವಾಗಿ ಹಂಪಿ ಉತ್ಸವ ಆಚರಣೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಂಪಿ ಉತ್ಸವ ನೆಸಲು ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ಹಸಿರು ನಿಶಾನೆ ತೋರಿದ್ದು, ಸರಳವಾಗಿ ಆಚರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ರದ್ದು ಪಡಿಸಲು ಸರ್ಕಾರ ನಿರ್ಧರಿಸಿತ್ತು, ಆದರೆ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವ ಆಚರಿಸಲು ನಿರ್ಧರಿಸಿದೆ.
ಮೈಸೂರು ದಸರಾ ವನ್ನು ಅದ್ಧೂರಿಯಾಗಿ ಆಚರಿಸುವ ಮುಖ್ಯಮಂತ್ರಿಗಳು ಹಂಪಿ ಉತ್ಸವ ರದ್ದುಗೊಳಿಸುವ ಮೂಲಕ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿಯ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ ರೆಡ್ಡಿ ಆರೋಪಿಸಿದ್ದರು. ಟವೆಲ್ ಹಾಸಿ ಭಿಕ್ಷೆ ಬೇಡಿಯಾದರೂ ಹಂಪಿ ಉತ್ಸವ ಆಚರಿಸುತ್ತೇವೆ ಎಂದು ಕೆಲವರು ಹೇಳಿದ್ದಾರೆ, ಆ ಮಂದಿ ಬಳ್ಳಾರಿಯನ್ನು ಹೇಗೆ ಲೂಟಿ ಮಾಡಿದ್ದಾರೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ ಎಂದು ರೆಡ್ಡಿಗೆ ತಿರುಗೇಟು ನೀಡಿದ್ದಾರೆ.

About the author

ಕನ್ನಡ ಟುಡೆ

Leave a Comment