ರಾಜಕೀಯ

ಉಡುಪಿ ಕಾಂಗ್ರೆಸ್ ಬಂಡಾಯ: ಎಐಸಿಸಿ ಸದಸ್ಯ ಅಮೃತ್ ಶೆಣೈ ಪಕ್ಷೇತರನಾಗಿ ಕಣಕ್ಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಐಸಿಸಿ ಸದಸ್ಯ ಅಮೃತ್ ಶೆಣೈ ಸ್ವತಂತ್ರ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮೈತ್ರಿ ಧರ್ಮದಿಂದ ಹೈಕಮಾಂಡ್ ಸ್ಥಳೀಯ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕೈಗೊಂಡಿರುವ ನಿರ್ಧಾರ ಹಾಗೂ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಮೃತ್ ಶೆಣೈ ಸ್ಪರ್ಧಾ ಕಣಕ್ಕೆ ಧುಮುಕಿದ್ದಾರೆ. ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆಗೆ ಉದ್ದೇಶಿಸಿದ್ದರೂ ಕೊನೆಗೆ ಮಧ್ಯಾಹ್ನ 2.45 ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ ಡಿಸೋಜಾ ಜತೆಗಿದ್ದರು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಾಕಷ್ಟು ಅಸಮಾಧಾನವಿದ್ದು, ಪಕ್ಷದವರೇ ಗೋ ಬ್ಯಾಕ್ ಅಭಿಯಾನ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್‍ಗೆ ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೂ, ಹೈಕಮಾಂಡ್ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ. ನಮ್ಮಲ್ಲಿ ಯಾವುದೇ ಚರ್ಚೆ ಮಾಡದೆ ಪ್ರಮೋದ್ ಮಧ್ವರಾಜ್ ಹೈಕಮಾಂಡ್‍ಗೆ ಒತ್ತಡ ಹಾಕದೆ ಜೆಡಿಎಸ್‍ನಿಂದ ಟಿಕೆಟ್ ಪಡೆದುಕೊಂಡಿರುವುದು ಕೂಡಾ ಬೇಸರ ತಂದಿದೆ. ಈ ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ಎಂದರು.

About the author

ಕನ್ನಡ ಟುಡೆ

Leave a Comment