ರಾಜಕೀಯ

ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿಗೆ ಗೆಲುವು ಸುಲಭ; ರಾಜಕೀಯ ಪಂಡಿತರ ಲೆಕ್ಕಾಚಾರ

ಬೆಂಗಳೂರು: ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಸೀಟು ಹಂಚಿಕೆ ಒಪ್ಪಂದದಲ್ಲಿ ನಿರಾಯಾಸವಾಗಿ ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಟ್ಟಿದಿಯೇ ಎಂಬ ಪ್ರಶ್ನೆ ಉಂಟಾಗುತ್ತದೆ. ಈ ಕ್ಷೇತ್ರಗಳಲ್ಲಿ ಜೆಡಿಎಸ್ ನ ಅಸ್ಥಿತ್ವ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ರೀತಿಯಲ್ಲಿ ಎಂದು ಹೇಳುತ್ತದೆ ಅಂಕಿಅಂಶ. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾಬಲ್ಯ ಅಧಿಕವಾಗಿದ್ದು ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗ್ಡೆ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಸಂಸದೆಯಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಸುಮಾರು 4 ಲಕ್ಷ ಮತಗಳು ಮತ್ತು ಜೆಡಿಎಸ್ ಗೆ ಹಿಂದಿನ ಚುನಾವಣೆಯಲ್ಲಿ ಸುಮಾರು 1.44 ಲಕ್ಷ ಮತಗಳು ಬಂದಿದ್ದವು. ಒಟ್ಟಾಗಿ ನೋಡಿದರೆ ಬಿಜೆಪಿ ಪಡೆದ 5.51 ಲಕ್ಷ ಮತಗಳಿಂದ ಕಡಿಮೆಯೇ ಇದೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪ್ರಾಬಲ್ಯ ಕಡಿಮೆಯೇ. ಕಾಂಗ್ರೆಸ್ ಶೇಕಡಾ 90ರಷ್ಟು ಮತ ಗಳಿಸಿದರೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯ ಗೆಲುವು ಕಾಣಬಹುದಷ್ಟೆ. 2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಉತ್ತರ ಕನ್ನಡದಲ್ಲಿ 1.33 ಲಕ್ಷ, ಕಾಂಗ್ರೆಸ್ ಅಭ್ಯರ್ಥಿ ಪ್ರಶಾಂತ್ ದೇಶಪಾಂಡೆಗೆ ಸುಮಾರು 4 ಲಕ್ಷ ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಒಟ್ಟು 5.46 ಲಕ್ಷ ಮತಗಳನ್ನು ಪಡೆದು ಜಯ ಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ ಸಂಪೂರ್ಣವಾಗಿ ಜೆಡಿಎಸ್ ಗೆ ಹೋದರೆ ಗೆಲ್ಲಬಹುದು. ಕಾರವಾರದಲ್ಲಿ ಹಿಂದಿನ ಚುನಾವಣೆಯಲ್ಲಿ ಸೋತಿದ್ದ ಆನಂದ್ ಅಸ್ನೋಟಿಕರ್ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಈ ಬಾರಿಯ ಚುನಾವಣೆಯಲ್ಲಿ ಕೆಲಸ ಮಾಡಿದರೆ ಗೆಲ್ಲಬಹುದು. ಮೂಡಿಗೆರೆ, ಶೃಂಗೇರಿ, ತರಿಕೆರೆ ಮತ್ತು ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳಿಗೆ ಸ್ವಲ್ಪ ಹೆಚ್ಚು ಮತಗಳು ಸಿಗಬಹುದು. ಉತ್ತರ ಕನ್ನಡದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಕಾಂಗ್ರೆಸ್ ನಿಂದ ಹೆಚ್ಚುವರಿ 4 ಲಕ್ಷ ಮತಗಳು ಸಿಗಬೇಕು ಎನ್ನುತ್ತಾರೆ ಮಾಡಿ ಸಚಿವ ಎಂ ರಘುಪತಿ. ಜೆಡಿಎಸ್ ಗೆ ಈ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವು ಕಷ್ಟ ಎಂದು ರಾಜಕೀಯವಾಗಿ ಬಣ್ಣಿಸಲಾಗುತ್ತಿದೆ.

About the author

ಕನ್ನಡ ಟುಡೆ

Leave a Comment