ರಾಷ್ಟ್ರ

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜಿನಾಮೆ

ಲಖನೌ: ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾತ್ತಿನಂತೆ ಗೋವಾ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿದು ಬಂದಿದೆ.

ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ಮಂಗಳವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಅವರ ರಾಜಿನಾಮೆಯನ್ನು ಪಕ್ಷ ಪರಿಗಣಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಉತ್ತರಪ್ರದೇಶದ ಗೋರಖ್ ಪುರ ಮತ್ತು ಫುಲ್ಪರ್ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ ರಾಜ್ ಬಬ್ಬರ್ ರಾಜಿನಾಮೆ ಕರಿತು ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

 

About the author

ಕನ್ನಡ ಟುಡೆ

Leave a Comment