ರಾಜಕೀಯ

ಉಪಚುನಾವಣೆ ಕದನ: ಮೈತ್ರಿ ಸರ್ಕಾರದಲ್ಲಿನ ಅಸಮಾಧಾನ ಬಿಜೆಪಿಗೆ ಲಾಭ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ರಂಗು ಏರತೊಡಗಿದ್ದು, ಈ ನಡುವಲ್ಲೇ ರಾಜ್ಯದ ಆಡಳಿತಾರೂಢ ಮೈತ್ರಿ ಸರ್ಕಾರದಲ್ಲಿ ಎದುರಾಗಿರುವ ಅಸಮಾಧಾನಗಳು ಬಿಜೆಪಿಗೆ ಭಾರೀ ಲಾಭವನ್ನು ತಂದು ಕೊಡಲಿದೆ ಎಂದು ಹೇಳಲಾಗುತ್ತಿದೆ. ಉಪಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ಮೂರು ಪಕ್ಷಗಳು ಮೂರು ಲೋಕಸಭಾ ಕ್ಷೇತ್ರ ಹಾಗೂ 2 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರೀ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿವೆ. ಅಸಮಾಧಾನಗಳ ನಡುವೆಯೂ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದೆ. ಈ ನಡುವೆ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಭಾರೀ ರಣತಂತ್ರಗಳನ್ನು ರೂಪಿಸುತ್ತಿದ್ದು, ಸ್ಥಳೀಯ ಮಟ್ಟದ ನಾಯಕರನ್ನು ಉತ್ತೇಜಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಮೈತ್ರಿ ಸರ್ಕಾರದ ಅಸಮಾಧಾನವನ್ನೇ ತನ್ನ ಲಾಭವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಪ್ರಮುಖವಾಗಿ ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮೈತ್ರಿ ಸರ್ಕಾರದ ವಿರುದ್ದ ದನಿ ಎದ್ದಿರುವ ಹಿನ್ನಲೆಯಲ್ಲಿ ಇದರ ಲಾಭ ಪಡೆಯಲು ಬಿಜೆಪಿ ಯತ್ನ ನಡೆಸುತ್ತಿದೆ. ಬಳ್ಳಾರಿ, ಜಮಖಂಡಿ ಹಾಗೂ ಶಿವಮೊಗ್ಗದಲ್ಲಿ ಗೆಲವು ಸಾಧಿಸಲು ಬಿಜೆಪಿ ಶ್ರಮ ಪಡುತ್ತಿದೆ. ಇದರಂದೆ ರಾಮನಗರ ಹಾಗೂ ಮಂಡ್ಯದಲ್ಲೂ ಹೆಚ್ಚಿನ ಮತಗಳನ್ನು ಪಡೆಯಲು ಎಲ್ಲಾ ರೀತಿಯ ಪರಿಶ್ರಮಗಳನ್ನು ಪಡಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮೈತ್ರಿ ಸರ್ಕಾರ ಒಂದೇ ವೇದಿಕೆಯಲ್ಲಿ ಶಕ್ತಿ ಪ್ರದರ್ಶಿಸಲು ಯತ್ನಿಸುತ್ತಿದೆ. ಆದರೆ, ಅಸಮಾಧಾನಗಳು ಮೂಡುತ್ತಲೇ ಇವೆ. ಮೈತ್ರಿ ಸರ್ಕಾರ ಆಂತರಿಕ ಕಿತ್ತಾಟ ಬಿಜೆಪಿಗೆ ಲಾಭವನ್ನು ನೀಡಲಿದೆ. ಜಿಲ್ಲಾ ಹಾಗೂ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ನಮಗೆ ಬೆಂಬಲಗಳನ್ನು ನೀಡುತ್ತಿದ್ದಾರೆಂದು ಬಿಜೆಪಿ ನಾಯಕರು ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಮಾಜಿ ಸಚಿವ ಎ.ಮಂಡಜು ಅವರು ಜೆಡಿಎಸ್ ವಿರುದ್ಧ ದನಿ ಎತ್ತಿದ್ದರು. ಹಾಸನದಲ್ಲಿ ಜೆಡಿಎಸ್’ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

About the author

ಕನ್ನಡ ಟುಡೆ

Leave a Comment