ರಾಜಕೀಯ ರಾಷ್ಟ್ರ ಸುದ್ದಿ

ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು

ನವದೆಹಲಿ: ದೇಶದ 15ನೇ ಉಪ ರಾಷ್ಟ್ರಪತಿ ಸ್ಥಾನಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಯುಪಿಎ ಬೆಂಬಲಿತ ಅಭ್ಯರ್ಥಿ ಹಾಗೂ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರನ್ನು ನಾಯ್ಡು ಪರಾಭವಗೊಳಿಸಿ ಉಪ ರಾಷ್ಟ್ರಪತಿ ಹುದ್ದೆಗೇರಿದ್ದಾರೆ.
ಒಟ್ಟು 760 ಮತಗಳಲ್ಲಿ ಎನ್‌ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು 516 ಮತ ಹಾಗೂ ಪರಾಜಿತ ಕಾಂಗ್ರೆಸ್‌‌ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ 244 ಮತ ಪಡೆದುಕೊಂಡಿದ್ದಾರೆ.
ಸಂಸತ್ ಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 5 ಗಂಟೆವರೆಗೆ ನಡೆಯಿತು. ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಿಗೆ ಮಾತ್ರ ಮತದಾನ ಮಾಡಲು ಅವಕಾಶವಿತ್ತು. 790 ಸಂಸದರು ತಮ್ಮ ಹಕ್ಕುಗಳನ್ನು ಚಲಾಯಿಸಿದ್ದಾರೆ. ಉಪರಾಷ್ಟ್ರಪತಿ ಆಯ್ಕೆಗೆ ಇಂದು ನಡೆದ ಮತದಾನದಲ್ಲಿ ಶೇಕಡ 98.21ರಷ್ಟು ಮತದಾನವಾಗಿದೆ. ಮತದಾನದ ಹಕ್ಕು ಹೊಂದಿರುವ 785 ಸಂಸದರ ಪೈಕಿ 771 ಮಂದಿ ಮತದಾನ ಮಾಡಿದ್ದರು.

About the author

ಕನ್ನಡ ಟುಡೆ

Leave a Comment