ರಾಜಕೀಯ

ಎಚ್‌ಡಿಕೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ : ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನೂ ಗೆಲ್ಲಲಾಗದ ಜೆಡಿಎಸ್‌ನ ಕುಮಾರಸ್ವಾಮಿ ಹಾಗೂ ಇನ್ನು 24 ದಿನದಲ್ಲಿ ನಾನೇ ಮುಖ್ಯಮಂತ್ರಿ ಎಂದು ಬುರುಡೆ ಬಿಡುತ್ತಾ ತಿರುಗುತ್ತಿರುವ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ವರುಣಾ ಕ್ಷೇತ್ರದಲ್ಲಿ ಗುರುವಾರ ರೋಡ್‌ ಶೋ ನಡೆಸಿ ಮಾತನಾ ಡಿದ ಅವರು, “ಈ ಚುನಾವಣೆ ನನ್ನ ಕೊನೆಯ ಚುನಾವಣೆ. ಮುಂದೆ ನಾನು ಚುನಾವಣೆಗೆ ನಿಲ್ಲುವುದಿಲ್ಲ.ಆದರೆ, ಸಕ್ರಿಯ ರಾಜಕೀಯದಲ್ಲಿರುತ್ತೇನೆ. ನನ್ನನ್ನು 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದೀರಿ. ಅದಕ್ಕಿಂತಲು ಹೆಚ್ಚಿನ ಅಂತರದಿಂದ ಡಾ.ಯತೀಂದ್ರರನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಬೇಕು. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ನಾನೇ ಮುಖ್ಯಮಂತ್ರಿ ಆಗುವ ಅವಕಾಶವೂ ಇದೆ. ಆಗ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿ ಮಾಡುತ್ತೇನೆ. ಬಡತನ ನಿವಾರಣೆಯೇ ಅಧಿಕಾರದ ಗುರಿ’ ಎಂದು ಹೇಳಿದರು.

 

About the author

ಕನ್ನಡ ಟುಡೆ

Leave a Comment