ರಾಷ್ಟ್ರ

ಎನ್.ಡಿ.ಎ ಮೈತ್ರಿಕೂಟ ತೊರೆದ ಟಿ.ಡಿ.ಪಿ  

ಹೈದರಾಬಾದ್: ಮೋದಿ ವಿರುದ್ಧ ಸಿಡಿದೆದ್ದ ಆಂಧ್ರ ಸಿಎಂ ನಾಯ್ಡು ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಇಂದು ಅವಿಶ್ವಾಸ ಗೊತ್ತುವಳಿ ಮಂಡನೆ. ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕೇಂದ್ರದ ಆಡಳಿತಾರೂಢ “ಎನ್ಡಿಎ” ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಮುಂದಾಗಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವ ತೆಲುಗು ದೇಶಂ ಪಕ್ಷ ಇದೀಗ ಎನ್ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧಾರ ಕೈಗೊಂಡಿದೆ.

ಟಿಡಿಪಿಯ ಈ ನಿರ್ಧಾರದಿಂದ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ತೀವ್ರ ಹಿನ್ನಡೆಯುಂಟಾದಂತಾಗಿದೆ.  ಎನ್ ಡಿ ಎ  ಮೈತ್ರಿ ತ್ಯಜಿಸುವ ಕುರಿತು ಪಕ್ಷದಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿರುವ ಪ್ರಕಟಣೆಯಲ್ಲಿ ಟಿಡಿಪಿ ತಿಳಿಸಿದೆ.ಪಕ್ಷದ ಪಾಲಿಟ್ ಬ್ಯೂರೋ ಸದಸ್ಯದ ಜೊತೆಗೆ ಈ ನಿರ್ಧಾರದ ಬಗ್ಗೆ ಚರ್ಚೆ ನಡೆಸಿರುವ ಚಂದ್ರಬಾಬು ನಾಯ್ಡು ಅವರು ಪಕ್ಷದ ತೀರ್ಮಾನದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೂ ಕೂಡ ಪತ್ರ ಬರೆಯಲಿದ್ದಾರೆ.

ಆಂಧ್ರಪ್ರದೇಶ ರಾಜ್ಯಕ್ಕೆ ಪ್ರಧಾನಮಂತ್ರಿ ಮೋದಿ ಸರ್ಕಾರ ಹೆಚ್ಚಿನ ಅನುದಾನ ನೀಡದ ಹಿನ್ನಲೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ತಿರುಗಿಬಿದ್ದಿತ್ತು. ಇದೀಗ ರಾಜ್ಯದ ಜನತೆಯ ಹಿತಕ್ಕಾಗಿ ರಾಜಕೀಯವನ್ನು ಬದಿಗಿಟ್ಟು ಹೋರಾಡುತ್ತೇವೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.

 

 

About the author

ಕನ್ನಡ ಟುಡೆ

Leave a Comment