ರಾಜ್ಯ ಸುದ್ದಿ

ನವದೆಹಲಿ: ಎಲ್ಲಾ 5 ರಾಜ್ಯಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಐದು ರಾಜ್ಯಗಳು ಸೇರಿ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿರುವ ಕೇಂದ್ರ ಚುನಾವಣಾ ಆಯೋಗ, ಇಂದಿನಿಂದಲೇ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಡಿಸೆಂಬರ್​ ಅಂತ್ಯದೊಳಗೆ ಎಲ್ಲಾ ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆಯನ್ನು ಮುಗಿಸುವುದಾಗಿ ಮುಖ್ಯ ಚುನಾವಣಾಧಿಕಾರಿ ಓಂ ಪ್ರಕಾಶ್​ ರಾವತ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ಧಾರೆ.

ನಾಲ್ಕು ರಾಜ್ಯಗಳಾದ ಮಧ್ಯಪ್ರದೇಶ, ಛತ್ತಿಸ್​ಘಡ, ರಾಜಸ್ಥಾನ್, ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದ ರಾಮನಗರ ಹಾಗೂ ಜಮಖಂಡಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಲಾಗಿದೆ. ಡಿಸೆಂಬರ್​ 15ರೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸುವುದಾಗಿ ಆಯೋಗ ತಿಳಿಸಿದೆ.

About the author

ಕನ್ನಡ ಟುಡೆ

Leave a Comment