ರಾಷ್ಟ್ರ

ಎಸ್’ಸಿ/ಎಸ್’ಟಿ ಕಾಯ್ದೆ ವಿವಾದ; ಭಾರತ್ ಬಂದ್ ಕರೆಗೆ ಪಂಜಾಬ್’ನಲ್ಲಿ ವ್ಯಾಪಕ ಬೆಂಬಲ

ಚಂಡೀಗಢ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಏ.2 ರಂದು ವಿವಿಧ ದಲಿತ ಸಮುದಾಯಗಳು ಭಾರತ್ ಬಂದ್’ಗೆ ಕರೆ ನೀಡಿದ್ದು, ಅತೀ ಹೆಚ್ಚು ಎಸ್’ಸಿಗಳ ಜನಸಂಖೆಯನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ ಪ್ರತಿಭಟನೆಗೆ ವ್ಯಾಪಕ ಬೆಂಬಲಗಳು ವ್ಯಕ್ತವಾಗತೊಡಗಿದೆ.
ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಸರ್ಕಾರ, ಸಾರ್ವಜನಿಕ ಸಾರಿಗೆ ಸೇರಿದಂತೆ ಇನ್ನಿತರೆ ಎಲ್ಲಾ ಸೇವೆಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದಲ್ಲದೆ, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳು, ಬ್ಯಾಂಕ್’ಗಳೂ ಕೂಡ ಬಂದ್ ಆಗಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಭಾರತ್ ಬಂದ್ ಕರೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಬಂದ್ ಹಿನ್ನಲೆಯಲ್ಲಿ ರಾಜ್ಯದ ಸಾರ್ವಜನಿಕ ಬಸ್ ಗಳು ರಸ್ತೆಯಲ್ಲಿ ಸಂಚಾರ ನಡೆಸುವುದಿಲ್ಲ. ಕರೆಗಳನ್ನು ಹೊರತುಪಡಿಸಿ, 2ಜಿ, 3ಜಿ, 4ಜಿ ಹಾಗೂ ಸಿಡಿಎಂಎ, ಎಸ್ಎಂಎಸ್ ಸೇವೆಗಳು, ಡೋಂಗಲ್ ಸೇರಿ ಎಲ್ಲಾ ರೀತಿಯ ಸೇವೆಗಳನ್ನು ಏ.1ರ ಸಂಜೆ 5 ರಿಂದ ಏಪ್ರಿಲ್ 2 ರಾತ್ರಿ 11ರವರೆಗೂ ಬಂದ್ ಮಾಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಪಂಜಾಬ್ ರಾಜ್ಯ ಶಿಕ್ಷಣ ಇಲಾಖೆ ಕೂಡ ಪರೀಕ್ಷೆಗಳನ್ನು ಮುಂದೂಡಿದೆ. ಸಿಬಿಎಸ್ಇ ಮತ್ತು ಐಸಿಎಸ್ಇ ಪರೀಕ್ಷೆಗಳನ್ನು ಮಾತ್ರ ವೇಳಾಪಟ್ಟಿಯನ್ವಯ ನಡೆಸಲಾಗುತ್ತಿದೆ. ಈಗಾಗಲೇ ಮುಂದೂಡಿರುವ ಪರೀಕ್ಷೆಗಳ ದಿನಾಂಕವನ್ನು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುತ್ತದೆ. ಈ ಕುರಿತ ಸಂದೇಶವನ್ನು ಎಲ್ಲಾ ಜಿಲ್ಲಾ ಶಿಕ್ಷಣ ಅಧಿಕಾರಿಗಳೂ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಿತಕರ ಘಟನೆಗಳನ್ನುೋ ನಡೆಯದಂತೆ ಎಚ್ಚರಿಕೆ ವಹಿಸಿರುವ ಪಂಜಾಬ್ ರಾಜ್ಯ ಸರ್ಕಾರ, ರಾಜ್ಯದ ಪೊಲೀಸರು ಸೇರಿದಂತೆ ಹೆಚ್ಚುವರಿಯಾಗಿ 12,000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದೆ ಎಂದು ತಿಳಿದುಬಂದಿದೆ. ಎಸ್’ಟಿ/ಎಸ್’ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳನ್ನು ತಕ್ಷಣವೇ ದಾಖಲಿಸಬೇಕು ಮತ್ತು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂಬ ನಿಯಮವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಇತ್ತೀಚೆಗಷ್ಟೇ ತೀರ್ಪೊಂದನ್ನು ನೀಡಿತ್ತು. ತೀರ್ಪು ಸಂಬಂಧಿಸಿ ಕಳೆದ ವಾರ ಕೇಂದ್ರ ಸಚಿವರುಗಳಾದ ರಾಮ್ ವಿಲಾಸ್ ಪಾಸ್ವಾನ್ ಮತ್ತು ಥಾವರ್ ಚಂದ್ ಗೆಹ್ಲೋಟ್ ನೇತೃತ್ವದ ಎನ್’ಡಿಎ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತ್ತು.

ಆಗ್ರಾ, ಬಿಹಾರ, ಒಡಿಶಾ, ಪಂಜಾಬ್ ರಾಜ್ಯಗಳಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಎಸ್’ಸಿ/ಎಸ್’ಟಿ ಕಾಯ್ದೆ ಕುರಿತು ಆದೇಶವನ್ನು ಸುಪ್ರೀಂಕೋರ್ಟ್ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಲಿ ದಲಿತ ಸಂಘಟನೆಗಳು ಆಗ್ರಾ, ಬಿಹಾರ, ಒಡಿಶಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂದು ವರದಿಗಿಳು ತಿಳಿಸಿವೆ.

About the author

ಕನ್ನಡ ಟುಡೆ

Leave a Comment