ರಾಜ್ಯ ಸುದ್ದಿ

ಎಸ್’ಸಿ, ಎಸ್’ಟಿ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣ: ಪ್ರಭುದ್ಧ ಯೋಜನೆಗೆ ಜಿ.ಪರಮೇಶ್ವರ್ ಚಾಲನೆ

ಬೆಂಗಳೂರು: ಉನ್ನತ ಶಿಕ್ಷಣಕ್ಕಾಗಿ ವಿದೇಶದಲ್ಲಿನ ವಿಶ್ವವಿದ್ಯಾಲಯಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಪ್ರಬುದ್ಧ ಯೋಜನೆಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಶುಕ್ರವಾರ ಚಾಲನೆ ನೀಡಿದರು.
ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಕೆಲವು ಪ್ರತಿಭಾವಂತ ದಲಿತ ಮಕ್ಕಳು ಆರ್ಥಿಕ ಹಾಗೂ ಇನ್ನಿತರ ಕಾರಣಗಳಿಗಾಗಿ ಉನ್ನತ ಶಿಕ್ಷಣ ಪಡೆಯಲು ಆಗುವುದಿಲ್ಲ. ಅಂತಹ ಮಕ್ಕಳಿಗಾಗಿ ವಿದೇಶದಲ್ಲಿ ವ್ಯಾಸಾಂಗ ಮಾಡಲು ನೂತನ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ, ಪ್ರಪಂಚ ಜ್ಞಾನ ಇನ್ನಷ್ಟು ಹೆಚ್ಚಾಗುತ್ತದೆ. ನಾನೂ ಕೂಡ ವಿದ್ಯಾರ್ಥಿ ವೇತನ ಪಡೆದುಕೊಂಡು ವಿದೇಶದಲ್ಲಿ ವ್ಯಾಸಾಂಗ ಮಾಡಿದ್ದೆ ಎಂದು ತಿಳಿಸಿದರು.
ನಮ್ಮಲ್ಲಿ ಶೇ.78ರಷ್ಟು ಸಾಕ್ಷರತಾ ಪ್ರಮಾಣ ಬೆಂಳೆದಿದೆಂದ. ಪರಿಶಿಷ್ಟ ಸಮುದಾಯದಲ್ಲಿ ಈ ಪ್ರಮಾಣ ಇನ್ನೂ ಶೇ.40ರ ಆಸುಪಾಸಿನಲ್ಲಿದೆ. ಇವರನ್ನು ಶೈಕ್ಷಣಿಕವಾಗಿ ಮುಂದೆ ತರುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಈ ಹಿಂದೆ ಸ್ನಾತಕೋತ್ತರ ವ್ಯಾಸಾಂಗಕ್ಕೆ ಮಾತ್ರ ಇದ್ದ ಆರ್ಥಿಕ ನೆರವನ್ನು ಸ್ನಾತಕಪೂರ್ವ ವ್ಯಾಸಾಂಗಕ್ಕೂ ಈ ಯೋಜನೆಯಲ್ಲಿ ಕಲ್ಪಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ವ್ಯಾಸಾಂಗ ಮಾಡುವ ಅವಕಾಶ ಸಿಗಲಿದೆ ಎಂದರು.

About the author

ಕನ್ನಡ ಟುಡೆ

Leave a Comment