ರಾಷ್ಟ್ರ

ಎಸ್‏ಸಿ/ಎಸ್‏ಟಿ ಕಾಯ್ದೆ ಸಂಬಂಧ ಭಾರತ್ ಬಂದ್: ಉತ್ತರ ಭಾರತದಾದ್ಯಂತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 4 ಜನರ ಸಾವು

ನವದೆಹಲಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ದೇಶಾದ್ಯಂತ ವಿವಿಧ ದಲಿತ ಪರ ಸಂಘಟನೆಗಳು  ಇಂದು ನಡೆಸುತ್ತಿರುವ  ಭಾರತ್ ಬಂದ್  ಪ್ರತಿಭಟನೆ ಕೆಲವೆಡೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದು, ಮಧ್ಯಪ್ರದೇಶದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಗ್ವಾಲಿಯರ್ ಹಾಗೂ ಮೊರೇನಾದಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಾನೂನೂ ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಮಹಾನಿರ್ದೇಶಕ ಮಾರ್ಕಾಂಡ್ ದೇವೂಸ್ಕರ್ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment