ರಾಜ್ಯ ಸುದ್ದಿ

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ: ಹೆಚ್. ಡಿ. ಕುಮಾರಸ್ವಾಮಿ

ಮೈಸೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ  ರೆಬೆಲ್ ಸ್ಟಾರ್  ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.ಅಂಬರೀಷ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದು, ಸಮಾಜದ ಎಲ್ಲಾ ವರ್ಗಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ಕುಮಾರಸ್ವಾಮಿ ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ರಾಜ್ ಕುಮಾರ್ ಅವರ ಕನಸಾಗಿದ್ದ ಕಲಾಭವನನ್ನು ಅಂಬರೀಷ್ ಪೂರ್ಣಗೊಳಿಸಿದ್ದಾರೆ. ರಾಜ್ಯವನ್ನು ಅಗಲಿದ ನಟನಿಗೆ ಗೌರವ ನೀಡಬೇಕಾದದ್ದು ನಮ್ಮ ಪ್ರಾಥಮಿಕ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಂಬರೀಷ್ ಸ್ಮಾರಕ ನಿರ್ಮಾಣ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.

About the author

ಕನ್ನಡ ಟುಡೆ

Leave a Comment