ರಾಜ್ಯ ಸುದ್ದಿ

ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್: ಜಾರಕಿಹೊಳಿ ಅಸಮಾಧಾನದ ಬೆಂಕಿಗೆ ತುಪ್ಪ ಸುರಿದರಾ ಡಿಕೆಶಿ

ಬೆಳಗಾವಿ: ಸಚಿವರುಗಳಾದ ಡಿ,ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿ ಹೊಳಿ ನಡುವೆ ಕೆಲ ತಿಂಗಳ ಹಿಂದೆ ಪಿಎಲ್ ಡಿ ಬ್ಯಾಂಕ್ ಚುನಾವಣೆಯಿಂದ ಉಂಟಾದ ಬಿರುಕು ಇನ್ನು ಮುಂದುವರಿದಿದೆ.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಭಟನೆ ವಾಪಸ್ ಪಡೆಯುವಂತೆ ಮನವೊಲಿಸುವ ಸಣ್ಣ ಪ್ರಯತ್ನವನ್ನು ಮಾಡಿರಲಿಲ್ಲ, ಆದರೆ ನಿನ್ನೆ ಸಚಿವ ಡಿ.ಕೆ ಶಿವಕುಮಾರ್ ಬೆಳಗಾವಿಗೆ ತೆರಳಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿ ಧರಣಿ ವಾಪಸ್ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಬಲ ನೀಡಿದ್ದಕ್ಕೆ  ಆಕ್ರೋಶಗೊಂಡಿದ್ದ ಜಾರಕಿಹೊಳಿ ಸಹೋದರರು ಡಿಕೆ ಶಿವಕುಮಾರ್ ಬೆಳಗಾವಿ ರಾಜಕೀಯದಲ್ಲಿ ತಲೆ ಹಾಕದಂತೆ ಆಕ್ರೋಶ ವ್ಯಕ್ತ ಪಡಿಸಿದ್ದರು, ಈಗ ಪ್ರತಿಭಟನೆ ನಡೆಸುತ್ತಿದ್ದ ರೈತರು ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿರುವ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದಾರೆ. ತಮ್ಮ ಒಡೆತನದ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ಯಾವುದೇ ಹಣ ನೀಡುವುಂತಿಲ್ಲ ಎಂದು ಹೇಳಿದ್ದರು. ಈಗ ಮತ್ತೆ ಶಿವಕುಮಾರ್ ಬೆಳಗಾವಿ ಕಬ್ಬು ಬೆಳೆಗಾರರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿರುವುದು ಉರಿವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

About the author

ಕನ್ನಡ ಟುಡೆ

Leave a Comment