ರಾಷ್ಟ್ರ ಸುದ್ದಿ

ಕರ್ತಾರ್ಪುರ ಕಾರಿಡಾರ್ ಕಾರ್ಯಕ್ರಮಕ್ಕೆ ನನ್ನ ಗೆಳೆಯ ಇಮ್ರಾನ್ ಆಹ್ವಾನಿಸಿದ್ದಾರೆ, ನಾನು ಖಂಡಿತ ಹೋಗುತ್ತೇನೆ: ಸಿಧು

ನವದೆಹಲಿ: ಕರ್ತಾರ್ಪುರ ಕಾರಿಡಾರ್ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ನನ್ನ ಗೆಳೆಯ ಇಮ್ರಾನ್ ಖಾನ್ ಆಹ್ವಾನ ನೀಡಿದ್ದು, ನಾನು ಖಂಡಿತವಾಗಿಯೂ ಹೋಗುತ್ತೇನೆಂದು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರು ಅವರು, ಗುರು ನಾನಕ್ ಅವರು ಎರಡು ದೇಶಗಳನ್ನು ಒಂದು ಮಾಡಲು ಸಹಾಯ ಮಾಡುತ್ತಿದ್ದಾರೆ. ಕೋಟ್ಯಾಂತರ ಜನರ ಪ್ರಾರ್ಥನೆ ಇಂದು ಸತ್ಯವಾಗುತ್ತಿದೆ. ಈ ಪ್ರಕ್ರಿಯೆ ಮೂರು ತಿಂಗಳ ಹಿಂದೆಯೇ ಆರಂಭವಾಗಿತ್ತು. ನನ್ನ ಗೆಳೆಯ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದು, ಖಂಡಿತವಾಗಿಯೂ ನಾನು ಹೋಗುತ್ತೇನೆ. ನನ್ನ ನೇತೃತ್ವ ಎಡರು ರಾಷ್ಟ್ರಗಳು ರಕ್ತಪಾತಕ್ಕೆ ಅಂತ್ಯ ಹಾಡಲಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಪ್ರಧಾನಿ ಇರ್ಮಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಕರ್ತಾರ್ಪುರ ಕಾರಿಡಾರ್’ನ್ನು ಪಾಕಿಸ್ತಾನ ತೆರೆಯಲಿದೆ ಎಂದು ಹೇಳಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಪಂಜಾಬ್’ನ ಗುರುದಾಸ್ಪುರದಲ್ಲಿರುವ ಡೇರಾ ಬಾಬಾ ನಾನಕ್’ನಿಂದ ಅಂತಾರಾಷ್ಟ್ರೀಯ ಗಡಿವರೆಗೆ ನಾವು ಕಾರಿಡಾರ್ ಅಭಿವೃದ್ಧಿಪಡಿಸುತ್ತೇವೆ. ಗಡಿಯಾಚೆಯಿಂದ ಕರ್ತಾರ್ಪುರವರೆಗೆ ನೀವೂ ಕಾರಿಡಾರ್ ಅಭಿವೃದ್ಧಿ ಮಾಡಿ ಎಂದು ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಕೆಲ ದಿನಗಳ ಹಿಂದೆ ಸಲಹೆ ಮಾಡಿತ್ತು. ಇದಾದ ಬೆನ್ನಲ್ಲೇ ಸಿಖ್ ಭಕ್ತರಿಗೆ ಗುರು ನಾನಕ್’ರ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸುವುದಾಗಿ ಪಾಕಿಸ್ತಾನ ಘೋಷಣೆ ಮಾಡಿತು.
ಸಿಖ್ ಧರ್ಮ ಸಂಸ್ಥಾಪಕ ಗುರು ನಾನಕ್ ದೇವ್ ಅವರ 550ನೇ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಗಡಿಗೆ ಹೊಂದಿಕೊಂಡಂತೆ ತನ್ನ ನೆಲದಲ್ಲಿರುವ ಗುರುನಾನಕ್ ಅವರ ಸಮಾಧಿ ಸ್ಥಳ ಕರ್ತಾರ್ಪುರ ಸಾಹಿಬ್’ಗೆ ತೆರಳುವ ಹಾದಿಯನ್ನು ಭಾರತಿಯ ಸಿಕ್ಖರಿಗೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ ಮಾಡಿತ್ತು. ಇದರಂತೆ ಯೋಜನೆಗೆ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ನವೆಂಬರ್ 28 ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

About the author

ಕನ್ನಡ ಟುಡೆ

Leave a Comment