ರಾಷ್ಟ್ರ ಸುದ್ದಿ

ಕರ್ನಾಟಕದಲ್ಲಿನ್ನೂ ಸಾಲ ಮನ್ನಾ ಆಗಿಲ್ಲ, ಟ್ವೀಟ್ ನಿಂದಷ್ಟೇ ಏನೂ ಆಗಲ್ಲ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ ಗಢದಲ್ಲಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ರೈತರ ಸಾಲ ಮನ್ನಾ ಮಾಡುವ ಮೂಲಕ, ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೂ ರೈತರ ಸಾಲ ಮನ್ನಕ್ಕಾಗಿ ಒತ್ತಡ ಹೇರುತ್ತಿದೆ. ಪತ್ರಿಕಾಗೋಷ್ಠಿಗಳಲ್ಲಿ ಸಾಲ ಮನ್ನಾ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.
ರಾಹುಲ್ ಗಾಂಧಿಗೆ ತಿರುಗೇಟು ನೀಡುವುದಕ್ಕೆ ಕರ್ನಾಟಕದ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಇರುವುದನ್ನು ಉಲ್ಲೇಖಿಸಿರುವ ಬಿಜೆಪಿ ನಾಯಕರು, ಪತ್ರಿಕಾ ಹೇಳಿಕೆ ಹಾಗೂ ಟ್ವೀಟ್  ಗಳಿಂದ ಏನೂ ಪ್ರಯೋಜನವಾಗುವುದಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಸಹ ರೈತರ ಸಾಲ ಮನ್ನಾ ಮಾಡಿಲ್ಲ, ಕ್ರಮೇಣ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದ ಜನತೆಯೂ ನಿಮ್ಮ ಸುಳ್ಳು ಭರವಸೆಗಳನ್ನು ಅರಿಯಲಿದ್ದಾರೆ ಎಂದು ಬಿಜೆಪಿ ಹೇಳಿದೆ.

About the author

ಕನ್ನಡ ಟುಡೆ

Leave a Comment