ರಾಜ್ಯ ಸುದ್ದಿ

ಕರ್ನಾಟಕದ ಮೀನು ಖರೀದಿಗೆ ಗೋವಾ ನಿಷೇಧ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಆಗ್ರಹ

ಬೆಂಗಳೂರು: ಕರ್ನಾಟಕದ ಮೀನು ಖರೀದಿಗೆ ಗೋವಾ ಸರ್ಕಾರ ನಿಷೇಧ ಹೇರಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಒತ್ತಾಯಿಸಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಲಿಂಗರಾಜು ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಕರ್ನಾಟಕ ಮೀನು ಖರೀದಿಗೆ ನಿಷೇಧ ಹೇರಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ. ಈ ಸಂಬಂದ ಗೋವಾ ಸರ್ಕಾರ ಮತ್ತು ಗೋವಾ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿಯೇ ಪ್ರಧಾನಮಂತ್ರಿಗಳನ್ನು ಬೇಟಿ ಮಾಡಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮೀನುಗಾರ ಸಮುದಾಯವನ್ನು ಬಲಗೊಳಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಕರಾವಳಿ ಪ್ರದೇಶದಲ್ಲಿ ಮೀನುಗಾರರನ್ನು ಬಲವರ್ಧನೆಗೊಳಿಸುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ. ಮೀನುಗಾರರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವುದರೊಂದಿಗೆ ಅವರ ಜೀವನ ಸುಧಾರಣೆಗಾಗಿ ನೂತನ ಕಾಂಗ್ರೆಸ್ ಮೀನುಗಾರ ವಿಭಾಗ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ನೂತನ ಅಧ್ಯಕ್ಷ ಲಿಂಗರಾಜು ರಾಜ್ಯಾಧ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಮೀನುಗಾರ ವಿಭಾಗದ ಜಿಲ್ಲಾ ಸಮಿತಿ ರಚಿಸುವ ಮೂಲಕ ಸಮುದಾಯಕ್ಕೆ ಮಾಹಿತಿ ನೀಡಲಿದ್ದಾರೆಂದು ತಿಳಿಸಿದರು. ವೇದಿಕೆಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮೀನುಗಾರರ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ಸಭಾಪತಿ ಉಪಸ್ಥಿತರಿದ್ದರು.

About the author

ಕನ್ನಡ ಟುಡೆ

Leave a Comment