ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಏ.3 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಎಂಟ್ರಿ

ಶಿವಮೊಗ್ಗ: ಕೇಂದ್ರ ಚುನಾವಣಾ ಆಯೋಗ “ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ” ದಿನಾಂಕ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಚುರುಕುಗೊಳ್ಳುತ್ತಿದ್ದು. ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಏ.3ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಿನ್ನೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಎಐಸಿಸಿ, ಕೆಪಿಸಿಸಿ ಮತ್ತು ಡಿಸಿಸಿ ಮುಖಂಡರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ರಾಹುಲ್ ಅವರು ಏ.3 ರಂದು ಬೆಳಿಗ್ಗೆ 11.30ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ ಮಧ್ಯಾಹ್ನ 1.30ಕ್ಕೆ ಹೊನ್ನಾಳಿಗೆ ತೆರಳಲಿದ್ದಾರೆ. ಕೇವಲ 3 ಗಂಟೆ ಅವಧಿಯಲ್ಲಿ ರೋಡ್ ಶೋ ಮತ್ತು ಸಮಾವೇಶ ನಡೆಸಲು ಮುಖಂಡರು ನಿರ್ಧರಿಸಿದ್ದಾರೆ.

 

 

About the author

ಕನ್ನಡ ಟುಡೆ

Leave a Comment