ರಾಜ್ಯ ಸುದ್ದಿ

ಕಾಂಗ್ರೆಸ್‌ನಲ್ಲಿ ಅತೃಪ್ತಿ ತಾಂಡವ,ಕಾದು ನೋಡಿ, ಭವಿಷ್ಯ ನುಡಿದ ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ. ಸಂಜೆಯವರೆಗೆ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗರರೊಂದಿಗೆ ಮಾತನಾಡಿದ ಬಿಎಸ್‌ವೈ ರಮೇಶ್‌ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದು ದೊಡ್ಡ ಪರಿಣಾಮ ಬೀರುತ್ತದೆ ಎಂದರು.

ಇಂದು ಪ್ರಮಾಣವಚನವಾಗುವುದೇ ಸಂಶಯ. ರಾಜ್ಯಪಾಲರು ಊರಲ್ಲಿ ಇಲ್ಲ ಎನ್ನುವ ಸುದ್ದಿ ಬಂದಿದೆ. ಆ ಬಗ್ಗೆ ನನಗೆ ಗೊತ್ತಿಲ್ಲ, ಸಂಜೆಯವರೆಗೆ ಕಾದು ನೋಡಬೇಕು ಎಂದರು.

ನಾವು 104 ಮಂದಿ ಶಾಸಕರು ವಿರೋಧಪಕ್ಷದಲ್ಲಿದ್ದು ಕಾದು ನೋಡುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದು ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

 

About the author

ಕನ್ನಡ ಟುಡೆ

Leave a Comment