ದೇಶ ವಿದೇಶ

ಕಾಂಗ್ರೆಸ್ ಅಡ್ಜಸ್ಟ್ ಮಾಡಿಕೊಳ್ಳುವ ಅಗತ್ಯ ಇದೆ, ದೇವೇಗೌಡ ಒಳ್ಳೆ ಮನುಷ್ಯ: ಮಮತಾ

ನವದೆಹಲಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಇತ್ತೀಚಿಗೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಒಬ್ಬ ಒಳ್ಳೆ ಮನುಷ್ಯ ಎಂದಿರುವ ಮಮತಾ, 1996ರಲ್ಲಿ ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ್ದನ್ನು ನೆನಪಿಸಿಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಮಾರಸ್ಯದಿಂದ ಇರಬೇಕು ಎಂದು ನಾವು ಬಯಸುತ್ತೇವೆ. ಅವು ಏಕೆ ಬೇರೆಯಾಗಬೇಕು? ಮತ್ತು ಏಕೆ ಬದಲಾಗಬೇಕು? ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ದೇವೇಗೌಡರನ್ನು ಅಡ್ಜಸ್ಟ್ ಮಾಡಿಕೊಳ್ಳಬೇಕಾದ ಅಗತ್ಯ ಇದೆ. ಇದಕ್ಕಾಗಿ ಕಾಂಗ್ರೆಸ್ ಏನು ಮಾಡಬೇಕು ಅಂತ ನಾನು ಹೇಳುವುದಿಲ್ಲ. ಆದರೆ ಅವರಿ ಒಗ್ಗಟ್ಟಾಗಬೇಕು ಎಂದು ದೀದಿ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment