ರಾಷ್ಟ್ರ ಸುದ್ದಿ

ಕಾಂಗ್ರೆಸ್ ಗೆ ನಾಯಕ, ನೀತಿ, ತತ್ವ ಸಿದ್ಧಾಂತ ಯಾವುದೂ ಇಲ್ಲ: ಅಮಿತ್ ಶಾ

ಚಿತ್ತೋರಗಢ್: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಕಾಂಗ್ರೆಸ್ ನಾಯಕ, ನೀತಿ ಅಥವಾ ತತ್ವ ಸಿದ್ಧಾಂತ ಯಾವುದೂ ಇಲ್ಲ ಎಂದು ಸೋಮವಾರ ಹೇಳಿದ್ದಾರೆ.
ಇಂದು ಚಿತ್ತೋರಗಢ್ ದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ನಿಮ್ಮ ಪಕ್ಷದ ನಾಯಕನ ಹೆಸರು ಬಹಿರಂಗಪಡಿಸಿ ಎಂದು ನಾನು ಪದೇಪದೇ ಹೇಳುತ್ತಿದ್ದೇನೆ. ಆದರೆ ಅವರು ಯಾವುದನ್ನೂ ಹೇಳುತ್ತಿಲ್ಲ ಎಂದರು. ಒಂದು ಕಡೆ ದೇಶಭಕ್ತರ ಗುಂಪಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವವಿದ್ದರೆ, ಮತ್ತೊಂದು ಕಡೆ ನಾಯಕನಿಲ್ಲದ ಗುಂಪು ಇದೆ ಎಂದು ಅಮಿತ್ ಶಾ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನರೇಂದ್ರ ಮೋದಿ ಸರ್ಕಾರ ದೇಶದ ಭದ್ರತೆಗಾಗಿ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಮತಕ್ಕಾಗಿ ದೇಶದ ಭದ್ರತೆಯೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

About the author

ಕನ್ನಡ ಟುಡೆ

Leave a Comment