ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಲ್ಲಿ ಜ್ವಾಲಾಮುಖಿ ಸ್ಪೋಟಗೊಳ್ಳಲು ಕಾಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಂಬರುವ ದಿನಗಳಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳಲು ಕಾಯುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಿಎಲ್ ಪಿ ಸಭೆಗೆ ಶಾಸಕರ ಗೈರು ಸಂಬಂಧ ಪ್ರತಿಕ್ರಿಯಿಸಿದ ಯಡಿಯೂರಪ್ಪ, ತಮ್ಮ ಬಲ ಪ್ರದರ್ಶಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿತ್ತು, ಸಭೆಗೆ ನಾಲ್ವರು ಅಸಮಾಧಾನಿತ ಶಾಸಕರು ಗೈರಾಗಿದ್ದರು,  ಶಾಸಕರು ಗೈರಿನಿಂದ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬದು ತಿಳಿಯುತ್ತದೆ.
 ಈ ಭಿನ್ನಾಬಿಪ್ರಾಯಗಳೇ ಮುಂದಿನ ದಿನಗಳಲ್ಲಿ ದೊಟ್ಟ ಮಟ್ಟದ ಜ್ವಾಲಾಮುಖಿಯಾಗಿ ಸ್ಪೋಟಗೊಳ್ಳಲು ಕಾಯುತ್ತಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರ ಗೈರು ಕಾಂಗ್ರೆಸ್ ಒಳಗಿನ ಆಂತರಿಕ ಭಿನ್ನಮತ ಮತ್ತು ಅಸಮಾಧಾನವನ್ನು ತೋರಿಸುತ್ತದೆ ಎಂದ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ, ಅದು ಅವರ ಹತಾಶೆ ಮತ್ತು ಭಯವನ್ನು ತೋರಿಸುತ್ತದೆ, ಶಾಸಕರ ಜೊತೆ ನಿಮ್ಮ ಬಾಂಧವ್ಯ ಹಾಗೂ ಸಂಬಂಧ ಗಟ್ಟಿಯಾಗಿದ್ದು ಚೆನ್ನಾಗಿದಿದ್ದರೇ ಏಕೆ ನೀವು ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಬೇಕಿತ್ತು ಎಂದು ಪ್ರಶ್ನಿಸಿದ್ದಾರೆ,
2008 ರಿಂದ ಬಿಜೆಪಿಯಿಂದ ಆಪರೇಷನ್ ಕಮಲ ಸಂಸ್ಕೃತಿ ಆರಂಭವಾಯಿತು ಎಂಬ ಕೆ,ಸಿ ವೇಣುಗೋಪಾಲ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಕಾಂಗ್ರೆಸ್ ನದ್ದು ಗಯಾ ರಾಮ್ ಸಂಸ್ಕೃತಿ ಎಂದು ತಿರುಗೇಟು ನೀಡಿದ್ದಾರೆ.

About the author

ಕನ್ನಡ ಟುಡೆ

Leave a Comment