ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮೊಳಕಾಲ್ಮೂರಿನ ತಿಪ್ಪೇಸ್ವಾಮಿ

ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಬಿ.ಜೆ.ಪಿ. ವಿರುದ್ಧ ಮುನಿಸಿಕೊಂಡಿದ್ದ ಮಾಜೀ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಇಂದು ಬೆಂಗಳೂರಿನಲ್ಲಿರುವ ಪ್ರದೇಶ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ತಿಪ್ಪೇಸ್ವಾಮಿ ಅವರು ತಮ್ಮ ಜನಪರ ಕಾರ್ಯಗಳ ಕಾರಣದಿಂದ ಮೊಳಕಾಲ್ಮೂರು ಜನರೊಂದಿಗೆ ತಳಮಟ್ಟದಲ್ಲಿ ಸಂಪರ್ಕವಿರಿಸಿಕೊಂಡಿದ್ದಾರೆ. ಹೀಗಾಗಿ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಿಪ್ಪೇಸ್ವಾಮಿ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸುತ್ತಾ ಹೇಳಿದರು.

‘ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ಜನತೆಗೆ ಯಾವುದೇ ಕೆಲಸಗಳನ್ನು ಮಾಡಿಲ್ಲ. ಅವರಿಗೆ ಈ ಕ್ಷೇತ್ರವನ್ನು ಬಿಟ್ಟುಕೊಡದೇ ಬೇರೆ ಆಯ್ಕೆ ಇಲ್ಲ. ಬಳ್ಳಾರಿಯಲ್ಲಿಯೂ ರಾಮುಲು ಅವರು ಹಿಡಿತ ಕಳೆದುಕೊಂಡಿದ್ದಾರೆ’ ಎಂದು ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ತಿಪ್ಪೇಸ್ವಾಮಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 41 ಸಾವಿರ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. 2013ರಲ್ಲಿ ನಡೆದ ಚುನಾವಣೆಯಲ್ಲಿ ತಿಪ್ಪೇಸ್ವಾಮಿ ಅವರು ಶ್ರೀರಾಮುಲು ಅವರ ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿ.ಎಸ್.ಆರ್. ಕಾಂಗ್ರೆಸ್ ಭಾರತೀಯ ಜನತಾ ಪಕ್ಷದೊಂದಿಗೆ ವಿಲೀನಗೊಂಡಿತ್ತು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿ ಅವರು ಬಿ.ಜೆ.ಪಿ.ಯೊಂದಿಗೆ ಗುರುತಿಸಿಕೊಂಡಿದ್ದರು.

 

About the author

ಕನ್ನಡ ಟುಡೆ

Leave a Comment