ರಾಜಕೀಯ ಸುದ್ದಿ

ಕಾಂಗ್ರೆಸ್ ರೆಸಾರ್ಟ್ ಫೈಟ್ ಬಗ್ಗೆ ಸ್ಪೀಕರ್, ಗವರ್ನರ್ ವರದಿ ಕೇಳಲಿ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ನಡುವೆ ನಡದಿರುವ ಮಾರಾಮಾರಿಯನ್ನು ಬಿಜೆಪಿ ಖಂಡಿಸಿದೆ, ಘಟನೆ ಸಂಬಂಧ ರಾಜ್ಯಪಾಲರು ಹಾಗೂ ಸ್ಪೀಕರ್ ವರದಿ ಕೇಳಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ,
ಮಾಜಿ ಸಚಿವ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಜರುಗಿಸಬೇಕು, ರಾಜ್ಯಪಾಲರು ಹಾಗೂ ಸ್ಪೀಕರ್ ಈ ಸಂಬಂಧ ವರದಿ ಕೇಳಬೇಕು ಎಂದು ಒತ್ತಾಯಿಸಿದ್ದಾರೆ,
ಶಾಸಕರು ಕುಡಿದು ಒಡೆದಾಡಿರುವುದು ಶಾಸಕರೆಲ್ಲಾ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಆರೋಪಿಸಿರುವ ಅವರು,  ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕು, ಈ ಸಂಬಂಧ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ.. ಬಿಜೆಪಿ ಶಾಸಕರೆಲ್ಲರೂ ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇವೆ ಎಂಬುದು ಸತ್ಯಕ್ಕೆ ದೂರವಾದ ಮಾತು, ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿಲ್ಲ,ಅವರನ್ನು ಭೇಟಿ ಮಾಡಿ ಚರ್ಚಿಸುವ ವಿಷಯ ಏನು ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

About the author

ಕನ್ನಡ ಟುಡೆ

Leave a Comment