ರಾಜಕೀಯ

ಕಾಂಗ್ರೆಸ್ ಸಭೆಗೂ ನನಗೂ ಯಾವುದೇ ಸಂಬಂಧವಿಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಆಪರೇಶನ್ ಕಮಲದ ಭೀತಿಯಲ್ಲೇ  ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ, ನನಗೂ ಕಾಂಗ್ರೆಸ್ ಸಿಎಲ್ ಪಿ ಗೂ ಯಾವುದೇ ಸಂಬಂಧವಿಲ್ಲ. ಅವರ ಶಾಸಕರನ್ನು ಸಭೆಗೆ ಕರೆದುಕೊಂಡು ಹೋಗುವುದು ಅವರ ಹೊಣೆ, ನಮ್ಮ ಶಾಸಕರ ರಕ್ಷಣೆ ನಮ್ಮ ಹೊಣೆ ನಾವು ಲೋಕಸಭಾ ಚುಣಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸೀಟುಗಳನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಆಪರೇಶನ್ ಕಮಲದ ಕಾರಣದಿಂದ ಅತೃಪ್ತ ಶಾಸಕರು ಸಭೆಗೆ ಗೈರು ಹಾಜರಾಗುವ ಭೀತಿಯಿಂದ ಕಾಂಗ್ರೆಸ್ ತನ್ನೆಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚನೆ ನೀಡಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರ್ನಾಟಕ ರಾಜಕೀಯ ವಲಯದಲ್ಲಿ ಅನೇಕ ಕುತೂಹಲಗಳಿಗೆ ಕಾರಣವಾಗಿದೆ.

 

About the author

ಕನ್ನಡ ಟುಡೆ

Leave a Comment