ದೇಶ ವಿದೇಶ ರಾಷ್ಟ್ರ

ಕಾಂಗ್ರೆಸ್ ಸರ್ಕಾರ ರೈತರ 8 ಸಾವಿರ ಕೋಟಿ ರೂ. ಮೊತ್ತದ ಸಾಲ ಮನ್ನಾ ಮಾಡಿದೆ  ರಾಹುಲ್ ಗಾಂಧಿ

ಮಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಮೂರನೇ ಹಂತದ ಜನಾಶೀರ್ವಾದ ಯಾತ್ರೆ ಅಂಗವಾಗಿ ಮಂಗಳೂರಿನ ಕಾಪುವಿನಲ್ಲಿಂದು ನಡೆದ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಕೆಲವರ್ಷಗಳಿಂದ ಬಿಜೆಪಿ ಸರ್ಕಾರ 15 ಶ್ರೀಮಂತರ 2.5 ಲಕ್ಷ ಕೋಟಿ ರೂ. ಮನ್ನಾ ಮಾಡಿದೆ ಎಂದು ಆರೋಪಿಸಿದರು.

ರೈತರ ಸಾಲ ಮನ್ನಾ ಮಾಡಿ ಎಂದು ಪ್ರಧಾನಿ ನರೇಂದ್ರಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕೇಳಿದರೆ  ಅದು ಕೇಂದ್ರಸರ್ಕಾರದ ನೀತಿ ಅಲ್ಲಾ ಎಂದು ಹೇಳುತ್ತಾರೆ ಎಂದು ಟೀಕಿಸಿದರು.

ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಣ  ಹಾಕುವುದಾಗಿ  ಪ್ರತಿವರ್ಷ 2 ಲಕ್ಷ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಧಿಕಾರಕ್ಕೆ ಬಂದಾಗ ನರೇಂದ್ರಮೋದಿ ದೇಶದ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಹೆಜ್ಜಾಡಿಯ ನಾರಾಯಣಗುರು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

 

About the author

ಕನ್ನಡ ಟುಡೆ

Leave a Comment