ರಾಷ್ಟ್ರ ಸುದ್ದಿ

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಪುಲ್ವಾಮದಲ್ಲಿ ಓರ್ವ ಉಗ್ರನ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ್ದು, ಈ ವೇಳೆ ಓರ್ವ ಉಗ್ರನನ್ನು ಸೈನಿಕರು ಹತ್ಯೆಗೈದಿದ್ದಾರೆ. ಪುಲ್ವಾಮಾ ಜಿಲ್ಲೆಯ ಬೊಂಗಮ್ ಕಾಕ್ಪರಾ ಅವಂತಿಪೋರಾದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆಯ 50 ರಾಷ್ಟ್ರೀಯ ದಳ ಹಾಗೂ ಎಸ್ ಒಜಿ ದಳಗಳ ಭದ್ರತಾ ಸಿಬ್ಬಂದಿಗಳು ತುರ್ತು ಕಾರ್ಯಾಚರಣೆ ನಡೆಸಿದ್ದಾರೆ.
ಸುಮಾರು 5ಕ್ಕೂ ಹೆಚ್ಚು ಉಗ್ರ ತಂಡ ಅಡಗಿರುವ ಪ್ರದೇಶದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರುರ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಉಗ್ರರು ಮತ್ತು ಸೇನೆ ನಡುವೆ ತೀವ್ರ ತರವಾದ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಸೈನಿಕರು ಹಾರಿಸಿದ ಗುಂಡಿಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಮೃತ ಉಗ್ರನನ್ನು ಪದ್ಗಮ್ ಪೋರಾ ನಿವಾಸಿ ಶೌಕಾತ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ ನಲ್ಲಿ ಈತ ಉಗ್ರ ಸಂಘಟನೆಗೆ ಸೇರಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಣಿವೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂತರ್ಜಾಲ ಸೇವೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

About the author

ಕನ್ನಡ ಟುಡೆ

Leave a Comment